ಏಕದಿನ ನಂತರ ಟಿ20ಯಲ್ಲೂ ಭಾರತ ಅಬ್ಬರ;ವಿಂಡೀಸ್​ ವಿರುದ್ಧ ಸರಣಿ ಜಯ

ಕ್ರೀಡೆ

ಕೋಲ್ಕತ್ತಾ:ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಕ್ಲೀನ್​ಸ್ವೀಪ್ ಮಾಡಿ ಮೆರೆದಾಡಿದ್ದ ಭಾರತ ಇದೀಗ ಟಿ20 ಸರಣಿಯನ್ನೂ ವಶಪಡಿಸಿಕೊಂಡಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್​​ ಮೈದಾನದಲ್ಲಿ ಶುಕ್ರವಾರ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 8 ರನ್​​ಗಳ ರೋಚಕ ಜಯ ಸಾಧಿಸುವ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಪಡೆದುಕೊಂಡಿದೆ. ಈ ಮೂಲಕ ರೋಹಿತ್ ಶರ್ಮಾ ಪರಿಪೂರ್ಣ ನಾಯಕನಾದ ಬಳಿಕ ಆಡಿದ ಎಲ್ಲ ಪಂದ್ಯಗಳಲ್ಲಿ ಭಾರತ ಗೆದ್ದ ಸಾಧನೆ ಮಾಡಿದೆ. ಆರಂಭಿಕರ ವೈಫಲ್ಯದ ನಡುವೆಯೂ ವಿರಾಟ್ ಕೊಹ್ಲಿ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಭ್ ಪಂತ್ ಅವರ ಅರ್ಧಶತಕ ತಂಡಕ್ಕೆ ಸಹಕಾರಿ ಆಯಿತು. ಬೌಲರ್​ಗಳ ಕಡೆಯಿಂದ ನಿರೀಕ್ಷೆಗೆ ತಕ್ಕ ಪ್ರದರ್ಶನ ಬಂದಿಲ್ಲವಾದರೂ ಅಂತಿಮ ಹಂತದಲ್ಲಿ ಸೋಲಿನ ಸುಳಿಯಿಂದ ಪಾರು ಮಾಡಿದರು.

ಇತ್ತ ವೆಸ್ಟ್ ಇಂಡೀಸ್ ಈ ಬಾರಿಯ ಭಾರತದ ಪ್ರವಾಸದಲ್ಲಿ ಒಂದೇ ಒಂದು ಪಂದ್ಯ ಗೆಲ್ಲದೆ ಭಾರೀ ಮುಖಭಂಗಕ್ಕೆ ಒಳಗಾಗಿದೆ. ಮೊದಲು ಬ್ಯಾಟಿಂಗ್​ ಮಾಡಿ ಉತ್ತಮ ಬ್ಯಾಟಿಂಗ್​ ಮಾಡಿದ ಟೀಂ ಇಂಡಿಯಾ 186 ರನ್​ ಕಲೆ ಹಾಕಿತು. 187ರನ್​ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್‌ಗೆ 3 ವಿಕೆಟ್‌ಗೆ 178 ರನ್ ಗಳಿಸಲಷ್ಟೇ ಸಾಧ್ಯವಾಯಿತು. ವಿಂಡೀಸ್‌ ಗೆಲುವಿಗೆ ಕೊನೆಯ ನಾಲ್ಕು ಎಸೆತಗಳಲ್ಲಿ 23 ರನ್‌ಗಳ ಅವಶ್ಯಕತೆಯಿತ್ತು. ಹರ್ಷಲ್ ಪಟೇಲ್ ಬೌಲಿಂಗ್‌ನಲ್ಲಿ ಕೊನೆಯ ನಾಲ್ಕು ಎಸೆತಗಳಲ್ಲಿ ಎರಡು ಸಿಕ್ಸರ್ ಸಿಡಿಸಿದ್ದ ಪೊವೆಲ್ ಟೀಮ್ ಇಂಡಿಯಾ ಪಾಳಯದಲ್ಲಿ ಭಯ ಹುಟ್ಟಿಸಿದರು. ಆದರೆ ನಂತರದ ಎರಡು ಎಸೆತಗಳು ಸಿಂಗಲ್ಸ್‌ ತೆಗೆದುಕೊಂಡ ಪರಿಣಾಮ ಭಾರತ 8 ರನ್‌ಗಳಿಂದ ಪಂದ್ಯ ಗೆದ್ದು ಬೀಗಿತು. ಅಲ್ಲದೆ ಮೂರು ಪಂದ್ಯಗಳ ಸರಣಿಯನ್ನ 2-0ಯಿಂದ ವಶಪಡಿಸಿಕೊಂಡಿದೆ

Leave a Reply

Your email address will not be published.