2002ರ ಗುಜರಾತ್ ಗಲಭೆ ಪ್ರಕರಣ: ಪ್ರಧಾನಿ ಮೋದಿಗೆ ಕ್ಲೀನ್ ಚಿಟ್, ಜಾಕಿಯಾ ಜಾಫ್ರಿ ಅರ್ಜಿ ವಜಾ

ರಾಷ್ಟ್ರೀಯ

ನವದೆಹಲಿ: 2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಕ್ಲೀನ್ ಚಿಟ್ ಸಿಕ್ಕಿದೆ.  ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಗೊಳಿಸಿದೆ.

ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಸೇರಿದಂತೆ ಹಲವರಿಗೆ ಎಸ್ ಐ ಟಿ ಈ ಹಿಂದೆ ಕ್ಲೀನ್ ಚಿಟ್ ನೀಡಿತ್ತು. ಇದನ್ನ ಪ್ರಶ್ನಿಸಿ ಜಾಕಿಯಾ ಜಾಫ್ರಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ನಲ್ಲೂ ಮೋದಿ  ಹಾಗ ಉಳಿದವರಿಗೆ ಇದೀಗ ಕ್ಲೀನ್ ಚಿಟ್ ಸಿಕ್ಕಿದೆ.

ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠವು 2012 ರಲ್ಲಿ ಎಸ್‌ಐಟಿ ಸಲ್ಲಿಸಿದ ಮುಕ್ತಾಯ ವರದಿಯ ವಿರುದ್ಧ ಝಕಿಯಾ ಜಾಫ್ರಿ ಅವರ ಪ್ರತಿಭಟನಾ ಅರ್ಜಿಯನ್ನು ತಿರಸ್ಕರಿಸಿದ ಮ್ಯಾಜಿಸ್ಟ್ರೇಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ನ್ಯಾಯಮೂರ್ತಿಗಳಾದ ದಿನೇಶ್ ಮಾಹೇಶ್ವರಿ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಪೀಠ, ಜಾಕಿಯಾ ಜಾಫ್ರಿ ಮನವಿಯು ಅರ್ಹತೆ ಹೊಂದಿಲ್ಲ ಎಂದು ಹೇಳಿದೆ.

Leave a Reply

Your email address will not be published.