ಬೆಂಗಳೂರಿನಲ್ಲಿ ಭೀಕರ ಅಪಘಾತ: ಇನ್ನೋವಾ ಕ್ರಿಸ್ಟಾ- ಕ್ವಾಲಿಸ್ ಕಾರುಗಳ ನಡುವೆ ಡಿಕ್ಕಿ

ಬೆಂಗಳೂರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಸರಣಿ ಅಪಘಾತ ಸಂಭವಿಸಿದೆ. ನಗರದ ಆರ್ ಪಿಸಿ ಲೇಔಟ್ ನ 87 ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು, ಇನೋವಾ ಕ್ರಿಸ್ಟಾ – ಕ್ವಾಲಿಸ್ ಕಾರುಗಳ ನಡುವೆ ಪರಸ್ಪರ ಡಿಕ್ಕಿ ಹೊಡೆದಿದ್ದು, ಈ ವೇಳೆ ಕಂಬಕ್ಕೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನೂ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ವಿಜಯನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ಈ ಪ್ರಕರಣ ಸಂಬಂಧ ವಿಜಯನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.