Home Latest ಅಪಘಾತದ ಪರಿಹಾರ ನೀಡುವಲ್ಲಿ ವಿಳಂಬ; ವಾಯುವ್ಯ ಸಾರಿಗೆ ಕಚೇರಿ ವಸ್ತುಗಳು ಸಂಪೂರ್ಣ ಜಪ್ತಿ

ಅಪಘಾತದ ಪರಿಹಾರ ನೀಡುವಲ್ಲಿ ವಿಳಂಬ; ವಾಯುವ್ಯ ಸಾರಿಗೆ ಕಚೇರಿ ವಸ್ತುಗಳು ಸಂಪೂರ್ಣ ಜಪ್ತಿ

ಅಪಘಾತದ ಪರಿಹಾರ ನೀಡುವಲ್ಲಿ ವಿಳಂಬ; ವಾಯುವ್ಯ ಸಾರಿಗೆ ಕಚೇರಿ ವಸ್ತುಗಳು ಸಂಪೂರ್ಣ ಜಪ್ತಿ

559
0

ಅಪಘಾತದಿಂದ ಮೃತಪಟ್ಟಿದ್ದ ಬಾಲಕನ ಸಂಬಂಧಿಗಳಿಗೆ ಪರಿಹಾರ ಹಣ ನೀಡುವಲ್ಲಿ ವಿಳಂಬ ಮಾಡಿದ ಕಾರಣ ವಾಯುವ್ಯ ಸಾರಿಗೆ ಕಚೇರಿಯ ವಸ್ತುಗಳನ್ನು ಜಪ್ತಿ ಮಾಡಿದ ಘಟನೆ ಗದಗ ನಗರದಲ್ಲಿ ನಡೆದಿದೆ. ನಗರದ ಮುಳಗುಂದ ನಾಕಾ ಬಳಿ ಇರುವ ವಾಯುವ್ಯ ಸಾರಿಗೆ ಕಚೇರಿಯಲ್ಲಿನ ಕಂಪ್ಯೂಟರ್, ಮಾನಿಟರ್, ಸಿಪಿಯು ಸೇರಿದಂತೆ ಹಲವಾರು ವಸ್ತುಗಳನ್ನು, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಶೇಖರ್ ಪಾಟೀಲ್ ಅವರ ಆದೇಶದ ಮೇರೆಗೆ ಜಪ್ತಿ ಮಾಡಲಾಗಿದೆ. 2009 ರಲ್ಲಿ ಗದಗನ ದಂಡಿನದುರ್ಗಮ್ಮ ದೇವಸ್ಥಾನದ ಬಳಿ ಅಪಘಾತ ನಡೆದು, ಈ ಘಟನೆಯಲ್ಲಿ ಬೆಟಗೇರಿ ನಿವಾಸಿ ಸಂಕಪ್ಪ ಶಿವಾನಂದ ಆಲೂರ (15) ಸ್ಥಳದಲ್ಲಿಯೇ ಮೃತಪಟ್ಟಿದ್ದ.

ಹುಬ್ಬಳ್ಳಿ-ಬಾಗಲಕೋಟೆ ಬಸ್ ಹರಿದು ಸ್ಥಳದಲ್ಲಿ ಸಂಕಪ್ಪನ ಸಾವು ಸಂಭವಿಸಿತ್ತು. ಪರಿಹಾರಕ್ಕೆ ಆಗ್ರಹಿಸಿ 2009 ರಲ್ಲಿ ಮೃತ ಬಾಲಕನ ಸಂಬಂಧಿಗಳು ನ್ಯಾಯಾಲಯದ ಮೊರೆಹೋಗಿದ್ದರು. ಪ್ರಕರಣದ ಕುರಿತು ಆದೇಶ ನೀಡಿದ್ದ ನ್ಯಾಯಾಲಯ ಗದಗ ಘಟಕದಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಸಾರಿಗೆ ಇಲಾಖೆಯವರು 2014 ಹೈಕೋರ್ಟ್ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಒಟ್ಟು 8 ಲಕ್ಷ ಪರಿಹಾರ ನೀಡುವಂತೆ ಆದೇಶ ನೀಡಿತ್ತು. ಅದರಲ್ಲಿ 5 ಲಕ್ಷ ಪರಿಹಾರ ನೀಡಲಾಗಿತ್ತು. ಉಳಿದ 3 ಲಕ್ಷ 16 ಸಾವಿರ ಪರಿಹಾರ ನೀಡದ ಕಾರಣ ಈಗ ಇಲಾಖೆಯ ವಸ್ತುಗಳ ಜಪ್ತಿಗೆ ಅದೇಶ ನೀಡಿಲಾಗಿದ್ದು, ಅರ್ಜಿದಾರರ ಪರ ವಕೀಲರಾದ ಅಶೋಕ ಹೊಸೂರ ನೇತೃತ್ವದಲ್ಲಿ ಜಪ್ತಿ ಕಾರ್ಯ ನಡೆಯಿತು.

VIAಅಪಘಾತದ ಪರಿಹಾರ ನೀಡುವಲ್ಲಿ ವಿಳಂಬ; ವಾಯುವ್ಯ ಸಾರಿಗೆ ಕಚೇರಿ ವಸ್ತುಗಳು ಸಂಪೂರ್ಣ ಜಪ್ತಿ
SOURCEಅಪಘಾತದ ಪರಿಹಾರ ನೀಡುವಲ್ಲಿ ವಿಳಂಬ; ವಾಯುವ್ಯ ಸಾರಿಗೆ ಕಚೇರಿ ವಸ್ತುಗಳು ಸಂಪೂರ್ಣ ಜಪ್ತಿ
Previous articleಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಶನಿವಾರ ಮತದಾನ; ಮತದಾರನ ಕೈಯಲ್ಲಿದೆ ಅಭ್ಯರ್ಥಿಗಳ ಭವಿಷ್ಯ
Next articleಪೊಲೀಸರ ಅಜಾಗರೂಕತೆ; ಕೊರೋನಾ ಎಮರ್ಜೆನ್ಸಿ ನಡುವೆ ಶಿಡ್ಲಘಟ್ಟದಲ್ಲಿ ಅದ್ದೂರಿ ಕರಗ ಮಹೋತ್ಸವ ಆಚರಣೆ

LEAVE A REPLY

Please enter your comment!
Please enter your name here