ಹೋಂ ಕ್ವಾರಂಟೈನ್ ಆದ್ರಾ ಅನಿತಾ ಕುಮಾರಸ್ವಾಮಿ?

ಅನಿತಾ ಕುಮಾರಸ್ವಾಮಿಯವರಿಗೆ ಹೋಂ ಕ್ವಾರಂಟೈನ್!

529
0

ರಾಜ್ಯದಲ್ಲಿ ಮಹಾಮಾರಿಯ ಅಬ್ಬರ ಹೆಚ್ಚಾಗಿದೆ. ಕೊರೊನಾ ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನಲೆಯಲ್ಲಿ ಮೂವರು ಸಚಿವರು ಸಭೆ ನಡೆಸಿ ಅಧಿಕಾರಿಗಳಿಗೆ ಟಫ್ ರೂಲ್ಸ್ ಜಾರಿ ಮಾಡುವಂತೆ ಸೂಚನೆ ನೀಡಿದ್ದಾರೆ.

ಅನಿತಾ ಕುಮಾರಸ್ವಾಮಿಯವರಿಗೆ ಹೋಂ ಕ್ವಾರಂಟೈನ್ ಗೆ ವೈದ್ಯರು ಸಲಹೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಹೆಚ್.ಡಿ.ಕುಮಾರಸ್ವಾಮಿಯವರು ಕೋವಿಡ್-19 ಸೋಂಕಿಗೆ ಒಳಗಾಗಿರುವುದರಿಂದ ರಾಮನಗರ ಶಾಸಕರಾದ ಶ್ರೀಮತಿ ಅನಿತಾ ಕುಮಾರಸ್ವಾಮಿಯವರಿಗೂ ಹೋಂ-ಕ್ವಾರಂಟೈನ್ ಆಗುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ವೈದ್ಯರ ಮುಂದಿನ ಸೂಚನೆ ಬರುವವರೆಗೂ ಶಾಸಕರ ಹೋಂ ಕ್ವಾರಂಟೈನ್ ನಲ್ಲೇ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಕೊರೊನಾ ಅತೀ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೆಲವು ದಿನಗಳ ಕಾಲ ಜೆಪಿ ನಗರದ ಗೃಹಕಛೇರಿ ಬಳಿಯೂ ಸಾರ್ವಜನಿಕರ ಪ್ರವೇಶ ಬೇಡವೆಂದು ವೈದ್ಯರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಅನ್ಯತಾ ಭಾವಿಸದೆ ಕಾರ್ಯಕರ್ತರು ಮುಖಂಡರುಗಳು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಕೊರೊನಾ ಸೊಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನ ಅನುಸರಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಅನಿತಾ ಕುಮಾರಸ್ವಾಮಿಯವರು ರಾಜ್ಯದ ಜನರಲ್ಲಿ ಕೇಳಿಕೊಂಡಿದ್ದಾರೆ.

ಇನ್ನೊಂದೆಡೆ ರಾಜ್ಯದಲ್ಲಿ ಕೊರೊನಾ ಕಂಟ್ರೋಲ್ ಮಾಡುವ ಹಿನ್ನಲೆ ಮೂವರು ಸಚಿವರಿಂದ ಹೈ ವೋಲ್ಟೆಜ್ ಮೀಟಿಂಗ್ ನಡೆಯಿತು. ಜಿಲ್ಲಾಧಿಕಾರಿಗಳ ಜತೆಗೆ ವಿಡಿಯೋ ಕಾನ್ಸರೆನ್ಸ್ ನಡೆಸಿ, ಕೊರೊನಾ ವಿರುದ್ದ ಹೋರಾಟ ನಡೆಸಲು ಟಫ್ ರೂಲ್ಸ್ ಜಾರಿ ಮಾಡುವಂತೆ ಸೂಚನೆ ನೀಡಲಾಯಿತು.

SOURCEಅನಿತಾ ಕುಮಾರಸ್ವಾಮಿಯವರಿಗೆ ಹೋಂ ಕ್ವಾರಂಟೈನ್!
Previous articleಸೇನೆಯ ಸಮವಸ್ತ್ರ ಧರಿಸಿಕೊಂಡು ಕ್ರೈಸ್ತ ಧರ್ಮದ ಹೆಸರಿನಲ್ಲಿ ಮತಾಂತರ ದಂದೆ!
Next articleನಾನೇ ಗೆಲ್ಲುತ್ತೆನೆ ಎಂಬ ವಿಶ್ವಾಸ ನನಗಿದೆ; ಸತೀಶ್ ಜಾರಕೀಹೊಳಿ

LEAVE A REPLY

Please enter your comment!
Please enter your name here