ಬೆಂಗಳೂರಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್..!

ಅಪರಾಧ

ಬೆಂಗಳೂರು: ಬೆಂಗಳೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಮೂಲದ ಅಭಿ ಮತ್ತು ಅಭಿಷೇಕ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಪ್ರತಿಷ್ಟಿತ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 7 ಕೆಜಿ 550 ಗ್ರಾಂ ಮಾದಕ ವಸ್ತು ಹಾಗೂ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೂ ಆರೋಪಿಗಳ ವಿರುದ್ಧ ಬ್ಯಾಟರಾಯನಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.