Home District ನಾಳೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ; ಯಾರ ಕಡೆ ಒಲಿಯಲಿದ್ದಾನೆ ಮತದಾರ?

ನಾಳೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ; ಯಾರ ಕಡೆ ಒಲಿಯಲಿದ್ದಾನೆ ಮತದಾರ?

181
0
SHARE

ಬೀದರ ಬ್ರೇಕಿಂಗ್; ನಾಳೆ ಏಪ್ರೀಲ್ 17ರಂದು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮತದಾನ ನಡೆಯಲಿದೆ. ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಹೆಚ್ಚುವರಿ 62 ಮತಗಟ್ಟೆಗಳು ಸೇರಿದಂತೆ ಒಟ್ಟು 326 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 326 ಮತಗಟ್ಟೆಗಳ ಪೈಕಿ 95 ಸೂಕ್ಷ್ಮ ಮತಗಟ್ಟೆಗಳೆಂದು ಮತ್ತು 231 ಮತಗಟ್ಟೆಗಳು ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದೆ. 1,14,794 ಮಹಿಳಾ ಮತದಾರರು, 1,24,984 ಪುರುಷ ಮತದಾರರು ಮತ್ತು ಇತರೇ ನಾಲ್ಕು ಜನರು ಸೇರಿ ಒಟ್ಟು 2,39,782 ಮತದಾರರು ಇದ್ದಾರೆ ಎಂದು ಲೆಕ್ಕಿಸಲಾಗಿದೆ.

26 ಸೇಕ್ಟರ್ ಆಫೀಸರ್ ಗಳನ್ನು ಒಳಗೊಂಡು ಒಳಗೊಂಡು, ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಪೊಲೀಂಗ್ ಆಫೀಸರ್ ಮತ್ತು ಇನ್ನೀತರ ಸೇರಿದಂತೆ ಚುನಾವಣಾ ಕರ್ತವ್ಯದಲ್ಲಿ ಒಟ್ಟು 1568 ಜನ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗಿಯಾಗಲಿದ್ದಾರೆ. ಬಸವಕಲ್ಯಾಣ ಉಪ ಚುನಾವಣೆಯಲ್ಲಿ 2163 ಮಹಿಳೆಯರು ಮತ್ತು 1384 ಪುರುಷರು ಸೇರಿ ಒಟ್ಟು 3547 ಯುವ ಮತದಾರರು ತಮ್ಮ ಮತ ಹಕ್ಕನ್ನು ಚಲಾಯಿಸಲಿದ್ದಾರೆ. ಬಸವಕಲ್ಯಾಣ ಕ್ಷೇತ್ರದಲ್ಲಿ 196 ಮಹಿಳೆಯರು, ಮೂವರು ಪುರುಷರು ಸೇರಿ ಒಟ್ಟು 199 ಜನ ಸೇವಾ ಮತದಾರರು ಇದ್ದಾರೆ ಎನ್ನಲಾಗಿದೆ.

ಮತದಾನ ದಿನದಂದು ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸಲು, ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಬಸವಕಲ್ಯಾಣದ ತೇರು ಮೈದಾನದಲ್ಲಿರುವ ಮಸ್ಟರಿಂಗ್ ಕೇಂದ್ರಕ್ಕೆ ಕರೆದೊಯ್ಯಲು ಬೀದರ ಹಳೆಯ ಬಸ್ ನಿಲ್ದಾಣದಿಂದ ಒಟ್ಟು 44 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಬಸವಕಲ್ಯಾಣ ಉಪ ಚುನಾವಣೆಗಾಗಿ 20 ಪಿಎಸ್‌ಐಗಳು, 5 ಸಿಪಿಐ, 2 ಡಿಎಸ್‌ಪಿ, 50 ಹೋಮ್ ಗಾರ್ಡ್ಸ, ಪ್ಯಾರಾ ಮಿಲಿಟರಿ ಫೋರ್ಸ್, ಡಿಆರ್ ತುಕುಡಿ, 6 ಕೆಎಸ್‌ಆರ್‌ಪಿ ತುಕುಡಿ ಸೇರಿದಂತೆ ಅಂದಾಜು 1000 ಪೊಲೀಸ್ ವ್ಯವಸ್ಥೆಯನ್ನು ನಿಯೋಜನೆ ಮಾಡಲಾಗಿದೆ.

ಉಪ ಚುನಾವಣೆಯ ಒಟ್ಟು 326 ಮತಗಟ್ಟೆಗಳ ಪೈಕಿ 172 ಮತಗಟ್ಟೆಗಳಲ್ಲಿ ವಿಕಲಚೇತನರಿರುವುದನ್ನು ಗುರುತಿಸಿದ್ದು, ಇದಕ್ಕಾಗಿ ಅಗತ್ಯ ಪ್ರಮಾಣದಲ್ಲಿ ವೀಲ್ ಚೇರ್‌ಗಳ ವ್ಯವಸ್ಥೆ ಮಾಡಲಾಗಿದೆ. ನಗರದ ಮತಗಟ್ಟೆ ಸಂಖ್ಯೆ 98 ಮತ್ತು ಗ್ರಾಮೀಣ ಭಾಗದ ಮತಗಟ್ಟೆ ಸಂಖ್ಯೆ 54ಗಳನ್ನು ಸಖಿ ಮತಗಟ್ಟೆಗಳನ್ನಾಗಿ ಸಿದ್ದಪಡಿಸಲಾಗಿದೆ. ಬಸವಕಲ್ಯಾಣ ಉಪ ಚುನಾವಣೆಗೆ ಒಟ್ಟು 24 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ಮೂರು ನಾಮಪತ್ರಗಳು ತಿರಸ್ಕೃತವಾಗಿದ್ದವು. ನಾಮಪತ್ರಗಳನ್ನು ಸಲ್ಲಿಸಿದ 14 ಅಭ್ಯರ್ಥಿಗಳ ಪೈಕಿ ಇಬ್ಬರು ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆದುಕೊಂಡಿದ್ದು ಅಂತಿಮವಾಗಿ ಕಣದಲ್ಲಿ 12 ಜನ ಅಭ್ಯರ್ಥಿಗಳಿದ್ದಾರೆ.

ಭಾರತೀಯ ಜನತಾ ಪಾರ್ಟಿ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್, ಜನತಾದಳ (ಜಾತ್ಯಾತೀತ), ಕರ್ನಾಟಕ ರಾಷ್ಟ್ರ ಸಮಿತಿ, ಶಿವಸೇನಾ, ಹಿಂದೂಸ್ತಾನ ಜನತಾ ಪಾರ್ಟಿ, ಆಲ್ ಇಂಡಿಯಾ ಮಜಲೀಸ್–ಇ- ಇತಿಹಾದುಲ್ ಮುಸ್ಲಿಮಿನ್, ಮತ್ತು ಅಖಿಲ ಭಾರತೀಯ ಮುಸ್ಲಿಂ ಲಿಗ್ (ಸೆಕ್ಯೂಲರ್) ಪಕ್ಷಗಳಿಂದ ಮತ್ತು ಸ್ವತಂತ್ರ ಅಭ್ಯರ್ಥಿಗಳಾಗಿ ನಾಲ್ವರು ಸೇರಿ ಒಟ್ಟು 12 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

LEAVE A REPLY

Please enter your comment!
Please enter your name here