BJP ಆಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬರುವ ಯತ್ನ ಮಾಡುತ್ತಿದೆ: ಶಾಸಕ ದಿನೇಶ್ ಗುಂಡೂರಾವ್

ಬೆಂಗಳೂರು

ಬೆಂಗಳೂರು: ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಮಹಾರಾಷ್ಟ್ರದಲ್ಲಿ‌ ಮತ್ತೆ ಕೊಳಕು ರಾಜಕೀಯ ಶುರು ಮಾಡಿರುವ BJP ಆಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬರುವ ಯತ್ನ ಮಾಡುತ್ತಿದೆ. ಆಪರೇಷನ್ ಕಮಲ BJPಯವರ ಅನಿಷ್ಟ ಕೂಸು. ಮಧ್ಯ ಪ್ರದೇಶ, ಕರ್ನಾಟಕದಲ್ಲಿ ಈಗಾಗಲೇ ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಿರುವ BJP ಈಗ ಮಹಾರಾಷ್ಟ್ರದಲ್ಲೂ‌ ಹೀನ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

BJPಯ ವರ್ತನೆ ಸಂವಿಧಾನ ಬಾಹಿರ. ನಾ ಖಾವೂಂಗಾ, ನಾ ಖಾನೇ ದೂಂಗಾ ಎಂದು ಬೊಗಳೆ ಭಾಷಣ ಬಿಗಿಯುವ ಮೋದಿಯವರು, ಆಪರೇಷನ್ ಕಮಲಕ್ಕೆ ಸುರಿಯುವ ಸಾವಿರಾರು ಕೋಟಿ ಹಣ ಯಾರು ತಿಂದು ವಿಸರ್ಜಿಸಿದ್ದು ಎಂದು ಹೇಳುತ್ತಾರೆಯೆ? ಮೋದಿಯವರು ಪ್ರಾಮಾಣಿಕರಾಗಿದ್ದರೆ ಮಹಾರಾಷ್ಟ್ರದಲ್ಲಿ ಈಗ ನಡೆಯುತ್ತಿರುವ ಆಪರೇಷನ್ ಕಮಲದಲ್ಲಿ ಕೈ ಬದಲಾಗುವ ಹಣದ ಮೂಲದ ಬಗ್ಗೆ ED ತನಿಖೆಗೆ ಆದೇಶಿಸಲು ಸಾಧ್ಯವೆ? ಎಂದು ಪ್ರಶ್ನಿಸಿದ್ದಾರೆ.

Leave a Reply

Your email address will not be published.