ಪ್ರಚಾರದ ಹುಚ್ಚಿಗಾಗಿ ಕಳಪೆ, ಹಾಳಾದ ಧ್ವಜಗಳನ್ನು ಬಿಜೆಪಿ ಮಾರಾಟ ಮಾಡಿದೆ: ರಾಜ್ಯ ಕಾಂಗ್ರೆಸ್

ಬೆಂಗಳೂರು

ಬೆಂಗಳೂರು: ಪ್ರಚಾರದ ಹುಚ್ಚಿಗಾಗಿ ಕಳಪೆ, ಹಾಳಾದ ಧ್ವಜಗಳನ್ನು ಬಿಜೆಪಿ ಮಾರಾಟ ಮಾಡಿದೆ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, RSS & ಬಿಜೆಪಿ ತಮ್ಮೊಳಗಿನ ತಿರಂಗಾ ದ್ವೇಷವನ್ನು ತೀರಿಸಿ ಕೊಳ್ಳಲೆಂದೇ ಧ್ವಜ ಸಂಹಿತೆಯನ್ನು ಬದಲಿಸಿ ರಾಷ್ಟ್ರಧ್ವಜದ ಘನತೆಯನ್ನು ಕುಗ್ಗಿಸುತ್ತಿವೆ. ರಾಜ್ಯ ಬಿಜೆಪಿ ಪ್ರಚಾರದ ಹುಚ್ಚಿಗಾಗಿ ಕಳಪೆ & ಹಾಳಾದ ಧ್ವಜಗಳನ್ನು ಮಾರಾಟ ಮಾಡಿದ್ದು ದೇಶಕ್ಕೆ ಎಸಗಿದ ಮಹಾನ್ ದ್ರೋಹ.

ಒಳಗೆ ತಿರಂಗಾ ದ್ವೇಷ, ಹೊರಗೆ ನಾಟಕ ಮಾಡಿದರೆ ಇಂತವೇ ಸಂಭವಿಸುತ್ತವೆ” ಎಂದು ಹೇಳಿದೆ. ಬಿಜೆಪಿ ಪಕ್ಷದ ನಿಷ್ಠೆ, ಭಕ್ತಿ, ಪ್ರೀತಿ ಭಗವಾಧ್ವಜಕ್ಕೊ, ರಾಷ್ಟ್ರಧ್ವಜಕ್ಕೋ? ಮೊದಲು ಸ್ಪಷ್ಟಪಡಿಸಿ ತಮ್ಮ ನಕಲಿ ನಾಟಕ ಮುಂದುವರೆಸಲಿ. ಬಿಜೆಪಿಗೆ ನಿಜವಾಗಿಯೂ ತಿರಂಗಾಪ್ರೇಮ ಇದ್ದರೆ ಭಗವಾಧ್ವಜವನ್ನೇ ರಾಷ್ಟ್ರಧ್ವಜವನ್ನಾಗಿ ಬದಲಿಸುತ್ತವೆ ಎಂದ ಶಾಸಕರಾದ ಈಶ್ವರಪ್ಪ, ಹರೀಶ್ ಪೂಂಜಾರ ಮೇಲೆ ಯಾವ ಕ್ರಮ ಕೈಗೊಂಡಿದೆ ಹೇಳಲಿ’ ಎಂದು ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ..

Leave a Reply

Your email address will not be published.