ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದ ಕೆಎಎಸ್ ಅಧಿಕಾರಿ..!

ಬೆಂಗಳೂರು

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಕೆಎಎಸ್‌ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನ KIADB ಕಚೇರಿಯಲ್ಲಿ ನಡೆದಿದೆ. KAS ಅಧಿಕಾರಿ ರಘುನಾಥ್‌, ಭೂಸ್ವಾಧೀನ ಅಧಿಕಾರಿ ವಿಜಯ್ ಬಲೆಗೆ ಬಿದ್ದಿದ್ದಾರೆ. ಜಮೀನು ಸಂಬಂಧ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದಾರೆ.

ಅಧಿಕಾರಿಗಳಾದ ರಘುನಾಥ್, ವಿಜಯ್‌ ಕುಮಾರ್‌ ಅವರನ್ನು ಬಂಧಿಸಿ ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ. ಲೋಕಾಯುಕ್ತ ಡಿವೈಎಸ್‌ಪಿ ಪ್ರದೀಪ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.