Home Politics ಅನಾರೋಗ್ಯದ ನಡುವೆಯೂ ಸಿಎಂ ಯಡಿಯೂರಪ್ಪ ಚುನಾವಣಾ ಪ್ರಚಾರ

ಅನಾರೋಗ್ಯದ ನಡುವೆಯೂ ಸಿಎಂ ಯಡಿಯೂರಪ್ಪ ಚುನಾವಣಾ ಪ್ರಚಾರ

348
0

ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸಿಎಂ ಯಡಿಯೂರಪ್ಪ ಪ್ರಚಾರ ಮಾಡಲಿದ್ದಾರೆ. ನಿನ್ನೆಯಷ್ಟೆ ಪ್ರಚಾರ ನಡೆಸಿದ್ದ ಯಡಿಯೂರಪ್ಪ ಆರೋಗ್ಯದಲ್ಲಿ ಏರುಪೇರಾಗಿತ್ತು.. ವೈದ್ಯರು ತಪಾಸಣೆ ನಡೆಸಿ ಯಡಿಯೂರಪ್ಪ ಸ್ಥಿರವಾಗಿದ್ದಾರೆಂದು ದೃಢಪಡಿಸಿದ್ದರು. ರಾತ್ರಿ ಬೆಳಗಾವಿಯಲ್ಲೇ ವಾಸ್ತವ್ಯ ಹೂಡಿದ್ದ ಯಡಿಯೂರಪ್ಪ ನಾಗನೂರು ರುದ್ರಾಕ್ಷಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆಯಲಿದ್ದಾರೆ. ಬಳಿಕ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ಬಳಿಕ ಹಿಂಡಲಗಾದಲ್ಲಿ ಪ್ರಚಾರ ಮಾಡಲಿದ್ದಾರೆ. ಸಂಜೆ ವೇಳೆ ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಸಂಜೆ 6.15ಕ್ಕೆ ಬೆಳಗಾವಿಯಿಂದ ಬೆಂಗಳೂರಿನತ್ತ ಪ್ರಯಾಣ ಬೆಳಸಲಿದ್ದಾರೆ.

ಬೆಳಗಾವಿಯಲ್ಲಿ ಸಿಎಂ ಯಡಿಯೂರಪ್ಪ ನವರ ಆರೋಗ್ಯವು ಏರುಪೇರಾಗಿದೆ ಎನ್ನಲಾಗಿದೆ. ಆರೋಗ್ಯದಲ್ಲಿ ರಾತ್ರಿ ಏರುಪೇರಾದ ಹಿನ್ನೆಲೆ, ವೈದ್ಯರ ತಂಡದಿಂದ ಸಿಎಂ ಬಿ.ಎಸ್ ಯಡಿಯೂರಪ್ಪನವರಿಗೆ ತಪಾಸಣೆ ನಡೆಸಲಾಗಿದೆ. ನಿನ್ನೆ ದಿನವಿಡೀ ಸಿಎಂ ಬಿ.ಎಸ್ ಯಡಿಯೂರಪ್ಪನವರು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಇಂದೂ ಕೂಡಾ ಮಂಗಳಾ ಅಂಗಡಿ ಪರವಾಗಿ ಪ್ರಚಾರವನ್ನು ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದರ ನಂತರ ನಾಗನೂರು ರುದ್ರಾಕ್ಷಿ ಮಠಕ್ಕೆ ಸಿಎಂ ಯಡಿಯೂರಪ್ಪ ನವರ ಭೇಟಿ, ಅಲ್ಲಿ ಬಿಜೆಪಿ ಪರ ರೋಡ್ ಶೋ ನಡೆಸಲಿದ್ದಾರೆ. ಸಿಎಂ ಯಡಿಯೂರಪ್ಪ. ಬೆಳಗಾವಿ ದಕ್ಷಿಣ, ಹಿಂಡಲಗಾ, ಬೆಳಗಾವಿ ಗ್ರಾಮಾಂತರದಲ್ಲಿ ಪ್ರಚಾರ ನಡೆಸಲಿದ್ದಾರೆ. ಒಟ್ಟು ಮೂರು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿರುವ ಸಿಎಂ ಯಡಿಯೂರಪ್ಪ, ಸಂಜೆ 6.15ಕ್ಕೆ ಬೆಳಗಾವಿಯಿಂದ ಬೆಂಗಳೂರಿನತ್ತ ಪ್ರಯಾಣವನ್ನು ಪ್ರಾರಂಭಿಸುತ್ತಾರೆ ಎಂದು ತಿಳಿಸಿದ್ದಾರೆ.

Previous articleಕೊರೋನಾ ಹಿನ್ನಲೆ; ಬೆಂಗಳೂರಿನ ಅದ್ದೂರಿ ಕರಗ ಮಹೋತ್ಸವಕ್ಕೆ ಬ್ರೇಕ್!
Next article6ರಿಂದ 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು?

LEAVE A REPLY

Please enter your comment!
Please enter your name here