24 ಗಂಟೆಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 9 ಮಂದಿ ಸಾವು

24 ಗಂಟೆಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 9 ಮಂದಿ ಸಾವು

336
0

ವರದಿ: ನಾ.ಅಶ್ವಥ್ ಕುಮಾರ್

ಚಾಮರಾಜನಗರ: ಕೋವಿಡ್ ಆಸ್ಪತ್ರೆಯಲ್ಲಿ ಕೋರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರಲ್ಲಿ ಸೋಮವಾರ ಬೆಳಗ್ಗೆ 9 ಗಂಟೆಯಿಂದ ಮಂಗಳವಾರ ಬೆಳಗ್ಗೆ 9 ಗಂಟೆಯ ತನಕ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಕೋವಿಡ್ ಆಸ್ಪತ್ರೆಯ ಮೂಲಗಳು ತಿಳಿಸಿದೆ. 24 ಗಂಟೆ ಅವಧಿಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 9 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 4 , ಯಳಂದೂರು ತಾಲ್ಲೂಕಿನಲ್ಲಿ 2 , ಕೊಳ್ಳೇಗಾಲ ತಾಲ್ಲೂಕಿನಲ್ಲಿ 2 , ಹನೂರು ತಾಲ್ಲೂಕಿನ 1, ಸೇರಿ 9 ಮಂದಿ ದುರ್ಮರಣ ಹೊಂದಿದ್ದಾರೆ ಎಂದು ಚಾಮರಾಜನಗರ ಕೋವಿಡ್ ಆಸ್ಪತ್ರೆಯ ಮೂಲಗಳು ತಿಳಿಸಿದೆ.

ಸೋಮವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರ ತನಕ 5 ಮಂದಿ ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 2 ಮಂದಿ, ಕೊಳ್ಳೇಗಾಲ ತಾಲ್ಲೂಕಿನ 1 ಮಂದಿ , ಯಳಂದೂರು ತಾಲ್ಲೂಕಿನ 2 ಮಂದಿ , ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ, ಸೋಮವಾರ ಸಂಜೆ 6 ರಿಂದ ಮಂಗಳವಾರ ಬೆಳಗ್ಗೆ 9 ಗಂಟೆಯ ತನಕ 4 ಮಂದಿ ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 2 ಮಂದಿ , ಹನೂರು ತಾಲ್ಲೂಕಿನ ಒಬ್ಬರು ಸಾವನ್ನಪ್ಪಿದ್ದಾರೆ.

24 ಗಂಟೆಯ ಅವಧಿಯಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ಮೃತರಾದ 9 ಮಂದಿಯಲ್ಲಿ 6 ಮಂದಿ ಕೋವಿಡ್ ಸೋಂಕಿತರು ಸಾವನ್ನಪಿದರೆ, 3 ಮಂದಿ ಕೋವಿಡ್ ಸೋಂಕಿನ ಲಕ್ಷಣಗಳಿಂದ ಸಾವನ್ನಪ್ಪಿದ್ದಾರೆ. ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿರುವ ಕೋವಿಡ್ ಸೋಂಕಿತರಿಗೆ ವೈದ್ಯರು ನೀಡಲಾಗುತ್ತಿದ್ದ ಚಿಕಿತ್ಸೆ ಫಲಕಾರಿಯಾಗದೆ 24 ಗಂಟೆಗಳಂತರದಲ್ಲಿ 9 ಮಂದಿ ಸಾವನ್ನಪ್ಪಿದ್ದು ಗಮನಿಸಿದರೆ ಕೋವಿಡ್ ಸೋಂಕು ಅಂತರಾಜ್ಯ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಮಿತಿ ಮೀರುತ್ತಿದೆ ಎನ್ನಲಾಗುತ್ತಿದೆ.

ಕೋವಿಡ್ ಸೋಂಕು ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಟಫ್ ರೂಲ್ಸ್ ಜಾರಿಗೊಳಿಸುವ ಮೂಲಕ ಲಾಕ್ ಡೌನ್ ಗೆ ಮುಂದಾಗಿದೆ. ಇಷ್ಟೆಲ್ಲಾ ಕಟ್ಟೆಚ್ಚರ ಇದ್ದರೂ ಸಹ ಚಾಮರಾಜನಗರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣವೂ ಸಹ ಅಧಿಕವಾಗುತ್ತಿದೆ.ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವ ಬಗ್ಗೆ ಹಾಗೂ ಸೋಂಕಿತರು ಸಾವನ್ನಪ್ಪುತ್ತಿರುವ ಸಂಖ್ಯೆ ಅಧಿಕವಾಗುತ್ತಿರುವ ಬಗ್ಗೆ ಜಿಲ್ಲೆಯ ಜನತೆ ತೀರಾ ಆತಂಕದಲ್ಲಿದ್ದಾರೆ.

VIA24 ಗಂಟೆಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 9 ಮಂದಿ ಸಾವು
SOURCE24 ಗಂಟೆಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 9 ಮಂದಿ ಸಾವು
Previous articleಲಾಕ್ ಡೌನ್ ವಿಚಾರ; ಡಿ.ಸಿ ಗಳ ಜೊತೆ ಪ್ರಧಾನಿ ಮೋದಿ ಸಂವಾದ
Next articleಕುರಿ ಹಟ್ಟಿ ಮೇಲೆ ಚಿರತೆಗಳು ದಾಳಿ; ಕುರಿಮರಿಗಳ ಮಾರಣಹೋಮ!

LEAVE A REPLY

Please enter your comment!
Please enter your name here