Home Crime 24 ಗಂಟೆಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 12 ಮಂದಿ ಸಾವು

24 ಗಂಟೆಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 12 ಮಂದಿ ಸಾವು

24 ಗಂಟೆಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 12 ಮಂದಿ ಸಾವು

455
0

ಚಾಮರಾಜನಗರ: ಕೋವಿಡ್ ಆಸ್ಪತ್ರೆಯಲ್ಲಿ ಕೋರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರಲ್ಲಿ ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಶನಿವಾರ ಬೆಳಗ್ಗೆ 9 ಗಂಟೆಯ ತನಕ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಕೋವಿಡ್ ಆಸ್ಪತ್ರೆಯ ಮೂಲಗಳು ತಿಳಿಸಿದೆ.

24 ಗಂಟೆ ಅವಧಿಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 12 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 5 , ಕೊಳ್ಳೇಗಾಲ ತಾಲ್ಲೂಕಿನಲ್ಲಿ 5 , ಹನೂರು ತಾಲ್ಲೂಕಿನ 2 , ಮಂದಿ ದುರ್ಮರಣ ಹೊಂದಿದ್ದಾರೆ ಎಂದು ಚಾಮರಾಜನಗರ ಕೋವಿಡ್ ಆಸ್ಪತ್ರೆಯ ಮೂಲಗಳು ತಿಳಿಸಿದೆ.

ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರ ತನಕ 7 ಮಂದಿ ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 2 ಮಂದಿ, ಕೊಳ್ಳೇಗಾಲ ತಾಲ್ಲೂಕಿನ ಮೂವರು , ಹನೂರು ತಾಲ್ಲೂಕಿನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಶುಕ್ರವಾರ ಸಂಜೆ 6 ರಿಂದ ಶನಿವಾರ ಬೆಳಗ್ಗೆ 9 ಗಂಟೆಯ ತನಕ 5 ಮಂದಿ ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 3 ಮಂದಿ , ಕೊಳ್ಳೇಗಾಲ ತಾಲ್ಲೂಕಿನ 2 ಮಂದಿ ಸಾವನ್ನಪ್ಪಿದ್ದಾರೆ.

24 ಗಂಟೆಯ ಅವಧಿಯಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ಮೃತರಾದ 12 ಮಂದಿಯಲ್ಲಿ 8 ಮಂದಿ ಕೋವಿಡ್ ಸೋಂಕಿತರು ಸಾವನ್ನಪಿದ್ದರೇ, 4 ಮಂದಿ ಕೋವಿಡ್ ಸೋಂಕಿನ ಲಕ್ಷಣಗಳಿಂದ ಸಾವನ್ನಪ್ಪಿದ್ದಾರೆ.

ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿರುವ ಕೋವಿಡ್ ಸೋಂಕಿತರಿಗೆ ವೈದ್ಯರು ನೀಡಲಾಗುತ್ತಿದ್ದ ಚಿಕಿತ್ಸೆ ಫಲಕಾರಿಯಾಗದೆ 24 ಗಂಟೆಗಳಂತರದಲ್ಲಿ 12 ಮಂದಿ ಸಾವನ್ನಪ್ಪಿದ್ದು ಗಮನಿಸಿದರೆ ಕೋವಿಡ್ ಸೋಂಕು ಅಂತರಾಜ್ಯ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಮಿತಿ ಮೀರುತ್ತಿದೆ ಎನ್ನಲಾಗುತ್ತಿದೆ.

ಕೋವಿಡ್ ಸೋಂಕು ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಟಫ್ ರೂಲ್ಸ್ ಜಾರಿಗೊಳಿಸುವ ಮೂಲಕ ಲಾಕ್ ಡೌನ್ ಗೆ ಮುಂದಾಗಿದೆ. ಇಷ್ಟೆಲ್ಲಾ ಕಟ್ಟೆಚ್ಚರ ಇದ್ದರೂ ಸಹ ಚಾಮರಾಜನಗರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣವೂ ಸಹ ಅಧಿಕವಾಗುತ್ತಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವ ಬಗ್ಗೆ ಹಾಗೂ ಸೋಂಕಿತರು ಸಾವನ್ನಪ್ಪುತ್ತಿರುವ ಸಂಖ್ಯೆ ಅಧಿಕವಾಗುತ್ತಿರುವ ಬಗ್ಗೆ ಜಿಲ್ಲೆಯ ಜನತೆ ತೀರಾ ಆತಂಕದಲ್ಲಿದ್ದಾರೆ.

VIA24 ಗಂಟೆಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 12 ಮಂದಿ ಸಾವು
SOURCE24 ಗಂಟೆಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 12 ಮಂದಿ ಸಾವು
Previous articleಜ್ಯೋತಿಷಿಗಳನ್ನು ಭೇಟಿಯಾದ ಡಿಕೆಶಿ
Next articleಖುದ್ದು ರಸ್ತೆಗಿಳಿದ ಪೊಲೀಸ್ ಆಯುಕ್ತ ಕಮಲ್ ಪಂಥ್

LEAVE A REPLY

Please enter your comment!
Please enter your name here