Home Home ಶುಕ್ರವಾರ ಚಾಮರಾಜನಗರ ಜಿಲ್ಲೆಯಲ್ಲಿ 325 ಮಂದಿ ಕೋರೊನಾ ದೃಡ – 6 ಸಾವು...

ಶುಕ್ರವಾರ ಚಾಮರಾಜನಗರ ಜಿಲ್ಲೆಯಲ್ಲಿ 325 ಮಂದಿ ಕೋರೊನಾ ದೃಡ – 6 ಸಾವು – 3161 ಸಕ್ರಿಯ ಪ್ರಕರಣ

325 Corona cases in Chamarajanagar district on Friday | ಶುಕ್ರವಾರ ಚಾಮರಾಜನಗರ ಜಿಲ್ಲೆಯಲ್ಲಿ 325 ಮಂದಿ ಕೋರೊನಾ ದೃಡ – 6 ಸಾವು - 3161 ಸಕ್ರಿಯ ಪ್ರಕರಣ

207
0
SHARE

ವರದಿ: ನಾ.ಅಶ್ವಥ್ ಕುಮಾರ್

ಚಾಮರಾಜನಗರ : ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಸಂಪರ್ಕ ಹೊಂದಿರುವ ಚಾಮರಾಜನಗರ ಜಿಲ್ಲೆಯಲ್ಲಿ ಕೋರೊನಾ ಸೋಂಕು ಹಾಗೂ ಸಾವಿನ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಶುಕ್ರವಾರ ಒಂದೇ ದಿನ 325 ಹೊಸ ಪ್ರಕರಣಗಳು ದಾಖಲಾಗಿದ್ದರೆ, ಕೋರೊನಾ ಸೋಂಕಿನಿಂದ ಬಳಲುತ್ತಿದ್ದ 6 ಮಂದಿ ಸಾವನ್ನಪ್ಪಿದ್ದು ಇದೂವರೆಗೂ 398 ಸೋಂಕಿತರು ಮೃತಪಟ್ಟಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೋರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು, ಜಿಲ್ಲೆಯಲ್ಲಿ ಸಕ್ರೀಯ ಕೋರೋನಾ ಸೋಂಕಿತರ ಸಂಖ್ಯೆ 3161 ಕ್ಕೆ ಇಳಿದಿದೆ. ಈ ನಡುವೆ ಜಿಲ್ಲೆಯಲ್ಲಿ ಗುರುವಾರ 1308 ಮಂದಿ ಕೋರೊನಾ ನಿಯಂತ್ರಣ ಲಸಿಕೆ ಹಾಕಿಸಿಕೊಂಡಿದ್ದು, ಇದೂವರೆಗೂ 183018 ಮಂದಿ ಕೊರೊನಾ ನಿಯಂತ್ರಣ ಲಸಿಕೆ ಹಾಕಿಸಿಕೊಂಡಿದ್ದಾರೆ .

ಚಾಮರಾಜನಗರ ಜಿಲ್ಲೆಯಲ್ಲಿ ಶುಕ್ರವಾರ ಕೋರೊನಾ ಸೋಂಕಿನಿಂದ ಗುಣಮುಖರಾಗಿ 299 ಮಂದಿ ಬಿಡುಗಡೆಹೊಂದಿದ್ದು, ಇದೂವರೆಗೂ ಕೋರೊನಾ ಸೋಂಕಿನಿಂದ 22037 ಮಂದಿ ಗುಣಮುಖರಾಗಿದ್ದಾರೆ . ಸೋಮವಾರ ಆರ್.ಟಿ.ಪಿ.ಸಿ.ಆರ್. ಪರೀಕ್ಷೆಯಿಂದ 278 ಹಾಗೂ ರ್ಯಾಪಿಡ್ ಪರೀಕ್ಷೆಯಿಂದ 47 ಮಂದಿ ಸೇರಿ 335 ಮಂದಿಗೆ ಕೋರೊನಾ ಸೋಂಕು ದೃಡವಾಗಿದೆ .

ಸೋಮವಾರ ಹೊಸದಾಗಿ ಕೋರೊನಾ ಸೋಂಕು ಪತ್ತೆಯಾದ 325 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನಲ್ಲಿ 85 ಮಂದಿ , ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 63 ಮಂದಿ, ಕೋಳ್ಳೆಗಾಲ ತಾಲ್ಲೂಕಿನಲ್ಲಿ 53 ಮಂದಿ , ಹನೂರು ತಾಲ್ಲೂಕಿನಲ್ಲಿ 97 ಮಂದಿ, ಯಳಂದೂರು ತಾಲ್ಲೂಕಿನಲ್ಲಿ 26 ಮಂದಿ ಹೊರ ಜಿಲ್ಲೆಯ ಒಬ್ಬರು ಸೇರಿ 325 ಮಂದಿಗೆ ಕೋರೊನಾ ಸೋಂಕು ದೃಡವಾಗಿದೆ.

ಕೋರೊನಾ ಸೋಂಕಿನಿಂದ ಮೃತವರೆಂದರೆ, ಚಾಮರಾಜನಗರ ಪಟ್ಟಣದ 34 ವರ್ಷದ ಮಹಿಳೆ, ತಾಲ್ಲೂಕಿನ ಕುದೇರು ಗ್ರಾಮದ 38 ವರ್ಷದ ಮಹಿಳೆ,ಯಾನಗನಹಳ್ಳಿ ಗ್ರಾಮದ 70 ವರ್ಷದ ಪುರುಷ, ಬಸವಾಪುರ ಗ್ರಾಮದ 42 ವರ್ಷದ ಪುರುಷ, ಕೊಳ್ಳೇಗಾಲ ಪಟ್ಟಣದ 41 ವರ್ಷದ ಪುರುಷ, ತಾಲ್ಲೂಕಿನ ಸತ್ತೇಗಾಲ ಗ್ರಾಮದ 55 ವರ್ಷದ ಪುರುಷ ಕೋವಿಡ್ ಆಸ್ಪತ್ರೆಯಯಲ್ಲಿ ಚಿಕಿತ್ಸೆ ಫಲಕಾರಿಯಾದೆ ಸಾವನ್ನಪ್ಪಿದ್ದಾರೆ.

ಇದೂವರೆಗೂ ಕೋವಿಡೇತರ ಕಾರಣದಿಂದ 20 ಮಂದಿ ಸಾವನ್ನಪ್ಪಿದ್ದಾರೆ ಎಂದು ಚಾಮರಾಜನಗರ ಜಿಲ್ಲಾಡಳಿತ ಹೊರಡಿಸಿದ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here