ಚಾಮರಾಜನಗರದಲ್ಲಿ ಇಂದು ಕೊರೋನಾ ಇಳಿಮುಖ!

ಚಾಮರಾಜನಗರದಲ್ಲಿ ಇಂದು ಕೊರೋನಾ ಇಳಿಮುಖ!

451
0

ಚಾಮರಾಜನಗರ : ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಸಂಪರ್ಕ ಹೊಂದಿರುವ ಚಾಮರಾಜನಗರ ಜಿಲ್ಲೆಯಲ್ಲಿ ಕೋರೊನಾ ಸೋಂಕು ಹಾಗೂ ಸಾವಿನ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಭಾನುವಾರ ಒಂದೇ ದಿನ 444 ಹೊಸ ಪ್ರಕರಣಗಳು ದಾಖಲಾಗಿದ್ದರೆ, ಕೋರೊನಾ ಸೋಂಕಿನಿಂದ ಬಳಲುತ್ತಿದ್ದ 09 ಮಂದಿ ಸಾವನ್ನಪ್ಪಿದ್ದು ಇದೂವರೆಗೂ 298 ಸೋಂಕಿತರು ಮೃತಪಟ್ಟಿದ್ದಾರೆ.ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೋರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು, ಜಿಲ್ಲೆಯಲ್ಲಿ ಸಕ್ರೀಯ ಕೋರೋನಾ ಸೋಂಕಿತರ ಸಂಖ್ಯೆ 3897ಕ್ಕೆ ಇಳಿದಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಭಾನುವಾರ ಕೋರೊನಾ ಸೋಂಕಿನಿಂದ ಗುಣಮುಖರಾಗಿ 822 ಮಂದಿ ಬಿಡುಗಡೆಹೊಂದಿದ್ದು, ಇದೂವರೆಗೂ ಕೋರೊನಾ ಸೋಂಕಿನಿಂದ 16300 ಮಂದಿ ಗುಣಮುಖರಾಗಿದ್ದಾರೆ. ಭಾನುವಾರ ಆರ್.ಟಿ.ಪಿ.ಸಿ.ಆರ್. ಪರೀಕ್ಷೆಯಿಂದ 325 ಹಾಗೂ ರ್ಯಾಪಿಡ್ ಪರೀಕ್ಷೆಯಿಂದ 119 ಮಂದಿಗೆ ಕೋರೊನಾ ಸೋಂಕು ದೃಡವಾಗಿದೆ .

ಭಾನುವಾರ ಹೊಸದಾಗಿ ಕೋರೊನಾ ಸೋಂಕು ಪತ್ತೆಯಾದ 444 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನಲ್ಲಿ 170 , ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 67 , ಕೋಳ್ಳೆಗಾಲ ತಾಲ್ಲೂಕಿನಲ್ಲಿ 108 , ಹನೂರು ತಾಲ್ಲೂಕಿನಲ್ಲಿ 68, ಯಳಂದೂರು ತಾಲ್ಲೂಕಿನಲ್ಲಿ 26 ಮಂದಿ, ಹೊರ ಜಿಲ್ಲೆಯ ಐವರು ಸೇರಿ 444 ಮಂದಿಗೆ ಕೋರೊನಾ ಸೋಂಕು ದೃಡವಾಗಿದೆ. ಈ ನಡುವೆ ಜಿಲ್ಲೆಯಲ್ಲಿ ಶನಿವಾರ 1306 ಮಂದಿ ಕೋರೊನಾ ನಿಯಂತ್ರಣ ಲಸಿಕೆ ಹಾಕಿಸಿಕೊಂಡಿದ್ದು, ಇದೂವರೆಗೂ 171300 ಮಂದಿ ಕೊರೊನಾ ನಿಯಂತ್ರಣ ಲಸಿಕೆ ಹಾಕಿಸಿಕೊಂಡಿದ್ದಾರೆ .

ಕೋರೊನಾ ಸೋಂಕಿನಿಂದ ಮೃತವರೆಂದರೆ, ಚಾಮರಾಜನಗರ ಪಟ್ಟಣದ 49 ವರ್ಷದ ಪುರುಷ, ತಾಲ್ಲೂಕಿನ ಯಡಪುರ ಗ್ರಾಮದ 26 ವರ್ಷದ ಪುರುಷ, ಹರದನಹಳ್ಳಿ ಗ್ರಾಮದ 76 ವರ್ಷದ ಮಹಿಳೆ, ಕೊಳ್ಳೇಗಾಲ ಪಟ್ಟಣದ 83 ವರ್ಷದ ಮಹಿಳೆ, ತಾಲ್ಲೂಕಿನ ಪಾಳ್ಯ ಗ್ರಾಮದ 31 ವರ್ಷದ ಪುರುಷ, ಉತ್ತಂಬಳ್ಳಿ ಗ್ರಾಮದ 65 ವರ್ಷದ ಪುರುಷ, ಗುಂಡ್ಲುಪೇಟೆ ತಾಲ್ಲೂಕಿನ ವಡಗಲಪುರ ಗ್ರಾಮದ 60 ವರ್ಷದ ಮಹಿಳೆ , ಯಳಂದೂರು ತಾಲ್ಲೂಕಿನ ಹೊನ್ನೂರು ಗ್ರಾಮದ 70 ವರ್ಷದ ಪುರುಷ, ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ 70 ವರ್ಷದ ಮಹಿಳೆ, ಕೋವಿಡ್ ಆಸ್ಪತ್ರೆಯಯಲ್ಲಿ ಚಿಕಿತ್ಸೆ ಫಲಕಾರಿಯಾದೆ ಸಾವನ್ನಪ್ಪಿದ್ದಾರೆ. ಇದೂವರೆಗೂ ಕೋವಿಡ್ ಸೋಂಕಿತರು ಮೃತಪಟ್ಟಿದ್ದರೆ, ದೃಡೀಕೃತ ಕೋವಿಡ್ ಪಾಸಿಟೀವ್ ರೋಗಿಯು ಕೋವಿಡೇತರ ಕಾರಣದಿಂದ 20 ಮಂದಿ ಸಾವನ್ನಪ್ಪದ್ದಾರೆ ಎಂದು ಚಾಮರಾಜನಗರ ಜಿಲ್ಲಾಡಳಿತ ಹೊರಡಿಸಿದ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

VIAಚಾಮರಾಜನಗರದಲ್ಲಿ ಇಂದು ಕೊರೋನಾ ಇಳಿಮುಖ!
SOURCEಚಾಮರಾಜನಗರದಲ್ಲಿ ಇಂದು ಕೊರೋನಾ ಇಳಿಮುಖ!
Previous articleಅಂಬರೀಶ್ ಬಿಟ್ರೆ ಕೊಡೊಗೈ ದಾನಿ ಅಂದ್ರೆ ಅದು ಭುವನ್: ಹಿರಿಯ ಕಲಾವಿದ ಅಮರ್ ನಾಥ್
Next articleಕೋವಿಡ್ ಹಾಟ್ ಸ್ಪಾಟ್ ಗಳಲ್ಲಿ ರ್ಯಾಪಿಡ್ ಆ್ಯಂಟಿಜಮ್ ಟೆಸ್ಟ್ ಗೆ ಕ್ರಮ: ಜಿಲ್ಲಾಧಿಕಾರಿ ಎಂ.ಆರ್ ರವಿ

LEAVE A REPLY

Please enter your comment!
Please enter your name here