Home NATIONAL ಪಿಎಂ ಜೊತೆ ಸಿಎಂ ಮಾತನಾಡಿದ್ದೇನು ಗೊತ್ತೇ?

ಪಿಎಂ ಜೊತೆ ಸಿಎಂ ಮಾತನಾಡಿದ್ದೇನು ಗೊತ್ತೇ?

ಪಿಎಂ ಜೊತೆ ಸಿಎಂ ಮಾತನಾಡಿದ್ದೇನು ಗೊತ್ತೇ?

620
0

ನವದೆಹಲಿ: ದೇಶದಲ್ಲಿ ಎರಡನೇ ಸುತ್ತಿನಲ್ಲಿ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ.‌ ಹಲವು ನಿರ್ಬಂಧಗಳ ನಡುವೆಯೂ ಪ್ರತಿ ದಿನ 4 ಲಕ್ಷಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ಕಂಡುಬರುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೂರವಾಣಿ ಮೂಲಕ‌ ಸಮಾಲೋಚನೆ ‌ನಡೆಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

ಮೇ 8ರಂದು ಮಹಾರಾಷ್ಟ್ರ, ಮಧ್ಯಪ್ರದೇಶ, ತಮಿಳುನಾಡು, ಹಿಮಾಚಲ ಪ್ರದೇಶ ಸಿಎಂಗಳ ಜೊತೆ ಚರ್ಚೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕ, ಪಂಜಾಬ್, ಉತ್ತರಾಖಂಡ ಮತ್ತು ಬಿಹಾರ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಆಯಾ ರಾಜ್ಯಗಳ ವಸ್ತು ಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಕೊರೋನಾ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಆಯಾ ರಾಜ್ಯಗಳು ತೆಗೆದುಕೊಂಡಿರುವ ಕ್ರಮಗಳು, ವ್ಯಾಕ್ಸಿನೇಷನ್‌, ಆಮ್ಲಜನಕದ ಸಮಸ್ಯೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.ಇಡೀ‌ ದೇಶದಲ್ಲಿ ಮಹಾರಾಷ್ಟ್ರ ಬಿಟ್ಟರೆ ಅತಿ ಹೆಚ್ಚು ಕೊರೋನಾ ಸೋಂಕು ಪೀಡಿತರು ಪತ್ತೆ ಆಗುತ್ತಿರುವುದು ಕರ್ನಾಟಕ ರಾಜ್ಯದಲ್ಲಿ.


ಇದನ್ನೂ ಓದಿ: 

ಹಾಗಾಗಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆಗೂ ಚರ್ಚೆ ನಡೆಸಿದ್ದು, ಯಡಿಯೂರಪ್ಪ ಅವರು ರಾಜ್ಯದ ಸ್ಥಿತಿಗತಿಗಳನ್ನು ಪ್ರಧಾನ ಮಂತ್ರಿಗಳಿಗೆ ವಿವರಿಸಿದ್ದಾರೆ. ವಿಶೇಷವಾಗಿ ರಾಜ್ಯ ಎದುರಿಸುತ್ತಿರುವ ಆಮ್ಲಜನಕದ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದಾರೆ ಎನ್ನಲಾಗಿದೆ. ಕರ್ನಾಟಕವೂ ಸೇರಿದಂತೆ ಎಲ್ಲಾ ರಾಜ್ಯಗಳಿಂದಲೂ ಮಾಹಿತಿ ಪಡೆದುಕೊಂಡಿರುವ ಪ್ರಧಾನಿ ಮೋದಿ ರಾಜ್ಯಗಳಿಗೆ ಕೇಂದ್ರ ಸರ್ಕಾರ ಯಾವ ರೀತಿ ಸ್ಪಂದಿಸುತ್ತೆ ಎಂಬ ಯಾವುದೇ ಭರವಸೆ ನೀಡಿಲ್ಲ ಎಂದು ತಿಳಿದುಬಂದಿದೆ.

ದೇಶದಲ್ಲಿ ಎರಡನೇ ಸುತ್ತಿನ ಕೊರೋನಾ ಅಲೆ ಹರಡಲು ಶುರುವಾದ ಮೇಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ನಡುವೆ ಎರಡು ಭಾರಿ ಮಹತ್ವದ ಸಭೆ ನಡೆಸಿದ್ದಾರೆ. ಇದಲ್ಲದೆ ಅತಿ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗುತ್ತಿರುವ 11 ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್, ಕೇರಳ, ಛತ್ತೀಸ್ಗಢ, ಉತ್ತರ ಪ್ರದೇಶ, ಗುಜರಾತ್, ತಮಿಳುನಾಡು, ದೆಹಲಿ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳದ ಆರೋಗ್ಯ ಸಚಿವ ಜೊತೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಸಭೆ ನಡೆಸಿದ್ದಾರೆ.

ಪ್ರಧಾನ ಮಂತ್ರಿ ಮುಖ್ಯಮಂತ್ರಿಗಳ ಜೊತೆ ನಡೆಸಿದ ಎರಡು ಸಭೆಗಳ ಬಳಿಕವಾಗಲಿ, ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ರಾಜ್ಯಗಳ ಆರೋಗ್ಯ ಸಚಿವರ ಮೂಲಕ ಸಭೆ ನಡೆಸಿದ ಬಳಿಕವಾಗಲಿ ಕೇಂದ್ರ ಸರ್ಕಾರದಿಂದ ಯಾವುದೇ ಪರಿಣಾಮಕಾರಿ ನಿರ್ಧಾರ ಆಗಿಲ್ಲ. ಈ ಬಾರಿ ಕೊರೊನಾ ಸೋಂಕು ಹರಡುವಿಕೆ ಮಿತಿ ಮೀರುತ್ತಿರುವುದರಿಂದ ಮಹತ್ವದ ನಿರ್ಣಯ ತೆಗೆದುಕೊಳ್ಳುವುದು ಅನಿವಾರ್ಯ.

VIAಪಿಎಂ ಜೊತೆ ಸಿಎಂ ಮಾತನಾಡಿದ್ದೇನು ಗೊತ್ತೇ?
SOURCEಪಿಎಂ ಜೊತೆ ಸಿಎಂ ಮಾತನಾಡಿದ್ದೇನು ಗೊತ್ತೇ?
Previous articleಆಕ್ಸಿಜನ್ ಲಭ್ಯತೆಯ ಕುರಿತು ಚರ್ಚೆ
Next articleಚಾಮರಾಜನಗರ ಜಿಲ್ಲೆಯಲ್ಲಿ 910 ಮಂದಿ ಕೋರೊನಾ ದೃಢ; 4522 ಸಕ್ರಿಯ ಪ್ರಕರಣ; ಇಂದು 12 ಮಂದಿ ದುರ್ಮರಣ

LEAVE A REPLY

Please enter your comment!
Please enter your name here