Home Home ಚಾಮರಾಜನಗರದಲ್ಲಿ ಕೊರೋನಾ ಅಟ್ಟಹಾಸ; 176 ಮಂದಿ ಕೋರೊನಾ ದೃಡ, 01 ಸಾವು, 2787 ಸಕ್ರಿಯ...

ಚಾಮರಾಜನಗರದಲ್ಲಿ ಕೊರೋನಾ ಅಟ್ಟಹಾಸ; 176 ಮಂದಿ ಕೋರೊನಾ ದೃಡ, 01 ಸಾವು, 2787 ಸಕ್ರಿಯ ಪ್ರಕರಣ

Corona in Chamarajanagar | ಚಾಮರಾಜನಗರದಲ್ಲಿ ಕೊರೋನಾ ಅಟ್ಟಹಾಸ

318
0
SHARE

ವರದಿ: ನಾ ಅಶ್ವಥ ಕುಮಾರ್

ಚಾಮರಾಜನಗರ : ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಸಂಪರ್ಕ ಹೊಂದಿರುವ ಚಾಮರಾಜನಗರ ಜಿಲ್ಲೆಯಲ್ಲಿ ಕೋರೊನಾ ಸೋಂಕು ಹೆಚ್ಚಾಗಿದ್ದರೆ, ಸಾವಿನ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಸೋಮವಾರ ಒಂದೇ ದಿನ 176 ಹೊಸ ಪ್ರಕರಣಗಳು ದಾಖಲಾಗಿದ್ದರೆ, ಕೋರೊನಾ ಸೋಂಕಿನಿಂದ ಬಳಲುತ್ತಿದ್ದ 01 ಮಂದಿ ಸಾವನ್ನಪ್ಪಿದ್ದು ಇದೂವರೆಗೂ 449 ಸೋಂಕಿತರು ಮೃತಪಟ್ಟಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೋರೊನಾ ಸೋಂಕಿತರ ಸಂಖ್ಯೆ ಏರಳಿತವಾಗುತ್ತಿದೆ. ಜಿಲ್ಲೆಯಲ್ಲಿ ಸಕ್ರೀಯ ಕೋರೋನಾ ಸೋಂಕಿತರ ಸಂಖ್ಯೆ 2787 ಕ್ಕೆ ಇಳಿದಿದೆ.ಚಾಮರಾಜನಗರ ಜಿಲ್ಲೆಯಲ್ಲಿ ಕೋರೊನಾ ಸೋಂಕಿನಿಂದ ಗುಣಮುಖರಾಗಿ 196 ಮಂದಿ ಬಿಡುಗಡೆಹೊಂದಿದ್ದು, ಇದೂವರೆಗೂ ಕೋರೊನಾ ಸೋಂಕಿನಿಂದ 25173 ಮಂದಿ ಗುಣಮುಖರಾಗಿದ್ದಾರೆ .

ಸೋಮವಾರ ಆರ್.ಟಿ.ಪಿ.ಸಿ.ಆರ್. ಪರೀಕ್ಷೆಯಿಂದ 143 ಹಾಗೂ ರ್ಯಾಪಿಡ್ ಪರೀಕ್ಷೆಯಿಂದ 33 ಮಂದಿ ಸೇರಿ 176 ಮಂದಿಗೆ ಕೋರೊನಾ ಸೋಂಕು ದೃಡವಾಗಿದೆ. ಸೋಮವಾರ ಹೊಸದಾಗಿ ಕೋರೊನಾ ಸೋಂಕು ಪತ್ತೆಯಾದ 176 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನಲ್ಲಿ 60 ಮಂದಿ , ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 42 ಮಂದಿ, ಕೋಳ್ಳೆಗಾಲ ತಾಲ್ಲೂಕಿನಲ್ಲಿ 18 ಮಂದಿ , ಹನೂರು ತಾಲ್ಲೂಕಿನಲ್ಲಿ 38 ಮಂದಿ, ಯಳಂದೂರು ತಾಲ್ಲೂಕಿನಲ್ಲಿ 16 ಮಂದಿ, ಹೊರ ಜಿಲ್ಲೆಯ ಇಬ್ಬರು ಸೇರಿ 176 ಮಂದಿಗೆ ಕೋರೊನಾ ಸೋಂಕು ದೃಡವಾಗಿದೆ.

ಈ ನಡುವೆ ಜಿಲ್ಲೆಯಲ್ಲಿ ಭಾನುವಾರ 1853 ಮಂದಿ ಕೋರೊನಾ ನಿಯಂತ್ರಣ ಲಸಿಕೆ ಹಾಕಿಸಿಕೊಂಡಿದ್ದು, ಇದೂವರೆಗೂ 210925 ಮಂದಿ ಕೊರೊನಾ ನಿಯಂತ್ರಣ ಲಸಿಕೆ ಹಾಕಿಸಿಕೊಂಡಿದ್ದಾರೆ. ಕೋರೊನಾ ಸೋಂಕಿನಿಂದ ಮೃತವರೆಂದರೆ, ಗುಂಡ್ಲುಪೇಟೆ ತಾಲ್ಲೂಕಿನ ಹೊರೆಯಾಲ ಗ್ರಾಮದ 72 ವರ್ಷದ ಪುರುಷ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದೂವರೆಗೂ 449 ಮಂದಿ ಮೃತರಾಗಿದ್ದು, ಇದೂವರೆಗೂ ಕೋವಿಡೇತರ ಕಾರಣದಿಂದ 20 ಮಂದಿ ಸಾವನ್ನಪ್ಪಿದ್ದಾರೆ ಎಂದು ಚಾಮರಾಜನಗರ ಜಿಲ್ಲಾಡಳಿತ ಹೊರಡಿಸಿದ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here