Home District ಕೋವಿಡ್ ಆಸ್ಪತ್ರೆಗೆ 50 ಲಕ್ಷ ರೂ ಮೌಲ್ಯದ ವೈದ್ಯಕೀಯ ಸಲಕರಣೆ ನೀಡಿದ ಮಾಜಿ ಶಾಸಕ ...

ಕೋವಿಡ್ ಆಸ್ಪತ್ರೆಗೆ 50 ಲಕ್ಷ ರೂ ಮೌಲ್ಯದ ವೈದ್ಯಕೀಯ ಸಲಕರಣೆ ನೀಡಿದ ಮಾಜಿ ಶಾಸಕ ಡಾ.ಎಂ.ಸಿ.ಸುಧಾಕರ್

548
0

ಚಿಕ್ಕಬಳ್ಳಾಪುರ : ಜಿಲ್ಲೆಯ ಚಿಂತಾಮಣಿ ನಗರದ ಕೋವಿಡ್ ಕೇರ್ ಸೆಂಟರ್‍ ಗೆ ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಾ ಎಂ.ಸಿ ಸುಧಾಕರ್ 50 ಲಕ್ಷ ರೂಪಾಯಿ ಮೌಲ್ಯದ ವೈದ್ಯಕೀಯ ಸಲಕರಣೆಗಳನ್ನು ಹಸ್ತಾಂತರ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಬೆಡ್, ಆಕ್ಸಿಜನ್, ವೆಂಟಿಲೇಟರ್ ಸಿಗದೇ ಅದೆಷ್ಟೋ ಜನ ಸೋಂಕಿತರು ತಮ್ಮ ಜೀವವನ್ನು ಕಳೆದುಕೊಂಡಿದ್ದರು,

ಇದನ್ನು ಮನಗಂಡ ಮಾಜಿ ಶಾಸಕ ಡಾ. ಎಂ.ಸಿ ಸುಧಾಕರ್ ತಮ್ಮ ವಿದ್ಯಾಗಣಪತಿ ಸೇವಾ ಟ್ರಸ್ಟ್ ಮೂಲಕ ಕೋವಿಡ್ ಸೆಂಟರ್‍ ಗೆ ಸುಮಾರು ಐವತ್ತು ಲಕ್ಷ ರೂಪಾಯಿ ಬೆಲೆ ಬಾಳುವ ಸಲಕರಣೆಗಳನ್ನ ಒದಗಿಸಿದ್ದಾರೆ. ಇನ್ನು ಕೋವಿಡ್ ಆಸ್ಪತ್ರೆಗೆ ಐವತ್ತು ಹಾಸಿಗೆ ದಿಂಬು, ಐವತ್ತು ಜಂಬೋ ಆಕ್ಸಿಜನ್ ಸಿಲಿಂಡರ್, ಐವತ್ತು ಮಂಚ, ಮಾಸ್ಕ್, ಸ್ಯಾನಿಟೈಸರ್, ಪಿಪಿಇ ಕಿಟ್ ಸೇರಿದಂತೆ ಆಸ್ಪತ್ರೆಗೆ ಸಿಲಿಂಡರ್ ಪೈಪ್ ಲೈನ್ ಸಮೇತ ನಿರ್ಮಿಸಿ ಕೊಡುವುದಾಗಿ ತಿಳಿಸಿದ್ದು, ತಮ್ಮ ಸಾಮಾಜಿಕ ಕಳಕಳಿ ತೋರಿದ್ದಾರೆ.

ಈ ಆಸ್ಪತ್ರೆಯಲ್ಲಿ ಇದ್ದಿದ್ದು ಐವತ್ತು ಆಕ್ಸಿಜನ್ ಬೆಡ್ಗನಳು, ಇಲ್ಲಿನ ಕೋವಿಡ್ ಸೋಂಕಿತರಿಗೆ ಬೆಡ್ ಸಿಗದೇ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಹೋಗುವಷ್ಟರಲ್ಲಿ ತಮ್ಮ ಪ್ರಾಣ ಕಳೆದುಕೊಂಡ ಉದಾಹರಣೆಗಳು ಇವೆ. ಆದ್ದರಿಂದ ಕೊರೊನಾ ಸಂಕಷ್ಟದ ಸಮಯದಲ್ಲಿ ಧನಿಕರೆಲ್ಲ ಮುಂದೆ ಬಂದು ಈ ರೀತಿ ಸಹಾಯ ಮಾಡಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನ ಹೆಚ್ಚಿಸಿದರೆ ಕೊರೊನಾ ವಿರುದ್ಧ ಹೋರಾಡಲು ಸಹಕಾರಿಯಾಗಲಿದೆ. ಅಂತ ಮಾಜಿ ಶಾಸಕ ಎಂ. ಸಿ ಸುಧಾಕರ್ ತಿಳಿಸಿದ್ದರು.

Previous articleರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಆ್ಯಂಬುಲೆನ್ಸ್ ಮತ್ತು ಆರೋಗ್ಯ ಕಿಟ್ ವಿತರಣೆ
Next articleವೈಟ್ ಫೀಲ್ಡ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಪ್ರಾಣವಾಯು!

LEAVE A REPLY

Please enter your comment!
Please enter your name here