Home District ಸಿಎಂ ಮತ್ತು ಸಚಿವ ಈಶ್ವರಪ್ಪ ಅವರ ನಡುವಿನ ಭಿನ್ನಮತ; ಸ್ಪೋಟ; ವಿಷಯ ಬಹಿರಂಗಗೊಂಡಿರುವುದು ಒಳ್ಳೆಯ...

ಸಿಎಂ ಮತ್ತು ಸಚಿವ ಈಶ್ವರಪ್ಪ ಅವರ ನಡುವಿನ ಭಿನ್ನಮತ; ಸ್ಪೋಟ; ವಿಷಯ ಬಹಿರಂಗಗೊಂಡಿರುವುದು ಒಳ್ಳೆಯ ಬೆಳವಣಿಗೆಯಲ್ಲ; ಶ್ರೀರಾಮುಲು

451
0

ರಾಯಚೂರು; ಸಿಎಂ ಮತ್ತು ಸಚಿವ ಈಶ್ವರಪ್ಪ ಅವರ ನಡುವಿನ ಭಿನ್ನಮತ ನಾಲ್ಕು ಗೋಡೆಗಳ ಮಧ್ಯೆ ಚರ್ಚೆಯಾಗುವಂಥದ್ದು ಬಹಿರಂಗಗೊಂಡಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಇದಕ್ಕೆ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಲಾಗುತ್ತದೆ.ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಬಸಾಪುರದಲ್ಲಿ ಎಂದು ಸಚಿವ ಶ್ರೀರಾಮುಲು ಹೇಳಿಕೆ.

ಮಸ್ಕಿ ಕ್ಷೇತ್ರದ ಬಸಾಪುರದಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು, ರಾಜ್ಯಪಾಲರಿಗೆ ಸಚಿವ ಈಶ್ವರಪ್ಪ ಪತ್ರ ಬರೆದಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸರಕಾರ ವಜಾಗೊಳಿಸಲು ಆಗ್ರಹಿಸುತ್ತಿರುವುದು ಹಾಸ್ಯಾಸ್ಪದವಾಗಿದೆ. ಪತ್ರ ಬರೆದ ಮಾತ್ರಕ್ಕೆ ಸರಕಾರ ವಜಾಗೊಳಿಸಬೇಕೆಂದು ಕಾನೂನಿನಲ್ಲಿ ಹೇಳಲಾಗಿದೆಯೇ? ಈ ಹಿಂದೆ ಎಸ್‌ಎಂ ಕೃಷ್ಣ ಸರಕಾರದ ಅವಧಿಯಲ್ಲಿ ಆಗ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಸಹ ಸಿಎಂ ಬಗ್ಗೆ ಬಹಿರಂಗವಾಗೇ ಅಸಮಾಧಾನ ತೋಡಿಕೊಂಡಿದ್ದರು. ಆಗ ಸರಕಾರ ವಜಾ ಮಾಡಲಾಗಿತ್ತೇ ಎಂದು ಪ್ರಶ್ನಿಸಿದರು.

ಮಸ್ಕಿ ಕ್ಷೇತ್ರದ ಅಭಿವೃದ್ಧಿ ಉದ್ದೇಶದಿಂದ ಪ್ರತಾಪಗೌಡ ಪಾಟೀಲ್ ಬಿಜೆಪಿ ಸೇರಿದ್ದಾರೆ ಎಂದ ರಾಮುಲು, ಬಿಜೆಪಿ ಪಕ್ಷಕ್ಕೆ ಕಾಂಗ್ರೆಸ್‌ನವರು ಆರೋಪಿಸಿದಂತೆ ಮಾರಾಟವಾಗಿಲ್ಲ. ರಾಜ್ಯದ ಬಿಜೆಪಿ ಸರಕಾರದ ಪರ ಅಲೆಯಿದ್ದು, ಮಸ್ಕಿ ಸೇರಿ ಉಪಚುನಾವಣೆಯಲ್ಲಿ ಗೆಲುವು ದೊರೆಯಲಿದೆ ಎಂದರು. ಅಲ್ಲದೇ ಮಸ್ಕಿ ಕ್ಷೇತ್ರದಲ್ಲಿ ನಡೆಯುತ್ತಿರುವ ನೀರಾವರಿ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಿಜೆಪಿ ಸರಕಾರದ ಅವಧಿಯಲ್ಲಿಯೇ ಹೆಚ್ಚು ಅನುದಾನ ನೀಡಲಾಗಿದೆ ಎಂದರು.

Previous articleಬೆಳಗಾವಿ ಲೋಕಸಭೆ ಉಪ ಚುನಾವಣೆ ಹಿನ್ನೆಲೆ; ಸತೀಶ ಜಾರಕಿಹೊಳಿಯವರಿಂದ ಚುನಾವಣಾ ಪ್ರಚಾರ ಸಭೆ
Next articleಲೋಕಸಭೆ ಚುನಾವಣೆ 2021; ರಂಗೇರಿದ ಪ್ರಚಾರದ ಅಬ್ಬರ; ಮತಬೇಟೆಗೆ ಇಳಿದ ಸತೀಶ್ ಜಾರಕಿಹೊಳಿ

LEAVE A REPLY

Please enter your comment!
Please enter your name here