ಕೈಗಾರಿಕಾ ಬೆಳವಣಿಗೆಯನ್ನು ಮತ್ತಷ್ಟು ಹೆಚ್ಚಿಸಲು ಹೊಸ ಯೋಜನೆಗಳಿಗೆ ಚಿಂತನೆ: ಸಚಿವ ಆರ್.ನಿರಾಣಿ

ತಂತ್ರಜ್ಞಾನ

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ  ಮತ್ತಷ್ಟು ಉತ್ತೇಜನ ನೀಡಿ ಉದ್ಯೋಗಗಳ ಸೃಷ್ಟಿಗೆ ಒತ್ತು  ನೀಡಿರುವ  ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯು ಸುಮಾರು 6,825ಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಸೃಷ್ಟಿಸುವ 2,689.51 ಕೋಟಿ ರೂ. ಮೌಲ್ಯದ 81 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಿದೆ.

 

ಸಮಿತಿಯು 50 ಕೋಟಿ ರೂ.ಗಿಂತ ಹೆಚ್ಚಿನ ಹೂಡಿಕೆಯ 7 ಪ್ರಮುಖ ಬೃಹತ್ ಮತ್ತು ಮಧ್ಯಮ ಗಾತ್ರದ ಕೈಗಾರಿಕಾ ಯೋಜನೆಗಳನ್ನು ಪರಿಗಣಿಸಿ ಅನುಮೋದನೆ ನೀಡಿದೆ. 1,229.43 ರೂ. ಮೌಲ್ಯದ ಈ ಯೋಜನೆಗಳು ರಾಜ್ಯದಲ್ಲಿ 1,734 ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕ ಸಚಿವ  ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಅಲ್ಲದೆ 132ನೇ ಎಸ್‍ಎಲ್‍ಎಸ್‍ಡಬ್ಲ್ಯುಸಿಸಿ ಸಭೆಯಲ್ಲಿ 15 ಕೋಟಿ ರೂ.ಗಿಂತ ಹೆಚ್ಚು ಹಾಗೂ 50 ಕೋಟಿ ರೂ.ಗಿಂತ ಕಡಿಮೆ ಹೂಡಿಕೆಯ 71 ಹೊಸ ಯೋಜನೆಗಳಿಗೆ ಅನುಮತಿ ನೀಡಲಾಗಿದೆ ಹಾಗೂ 1,308.06 ಕೋಟಿ ರೂ. ಮೌಲ್ಯದ ಈ ಯೋಜನೆಗಳು ರಾಜ್ಯದಲ್ಲಿ 5,091 ಜನರಿಗೆ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ. 151.42 ಕೋಟಿ ರೂ. ಹೂಡಿಕೆಯ ಮೂರು ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. 2,689.51 ಕೋಟಿ ರೂ.ಗಳ ಹೂಡಿಕೆಯೊಂದಿಗೆ 6,825 ಜನರಿಗೆ ಉದ್ಯೋಗಾವಕಾಶವಿರುವ ಒಟ್ಟು 81 ಯೋಜನೆಗಳಿಗೆ ಅನುಮತಿ ನೀಡಲಾಗಿದೆ.

Leave a Reply

Your email address will not be published.