ವೈದ್ಯರ ನಿರ್ಲಕ್ಷ್ಯ: ಜನ್ಮ ಕೊಟ್ಟ ಮಗುವಿನ ಮುಖ ನೋಡದೆ ಬಾಣಂತಿ ತಾಯಿ ಸಾವು..!

ಜಿಲ್ಲೆ

ಕುಣಿಗಲ್: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ತೆರೆದಕುಪ್ಪೆ ಗ್ರಾಮಸ್ಥರು ಸರ್ಕಾರಿ ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟನೆ ನಡೆಸಿ ಆಸ್ಪತ್ರೆ ಆಡಳಿತಾಧಿಕಾರಿ ಗಣೇಶ್ ಬಾಬು ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆಯಿತು. ತಾಲೂಕಿನ ಕೊತ್ತಗೆರೆ ಹೋಬಳಿ ತೆರೆದಕುಪ್ಪೆ ಗ್ರಾಮದ ಮಹಿಳೆ ಪಲ್ಲವಿ (21) ಮೃತ ಬಾಣಂತಿ.ಜುಲೈ 6ರಂದು ಪಲ್ಲವಿ ಎಂಬವರನ್ನು ಹೆರಿಗೆಗೆಂದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು,

ಅಲ್ಲಿನ ವೈದ್ಯರೊಬ್ಬರು ಹಣ ನೀಡಿದರೆ ಮಾತ್ರ ಹೆರಿಗೆ ಮಾಡುವುದು ಎಂದು ಆಕೆಯ ಪೋಷಕರಲ್ಲಿ ಹಣದ ಬೇಡಿಕೆ ಇಟ್ಟಿದ್ದರು. ಬಳಿಕ ಆಕೆಯ ಪತಿ ಹಣ ನೀಡಿದ ನಂತರ ಅಲ್ಲಿನ ವೈದ್ಯರು ಸಾಮಾನ್ಯ ಹೆರಿಗೆ ಮಾಡಲು ಸಾಧ್ಯವಿಲ್ಲ ಎಂದು ಸಿಸೇರಿಯನ್‌ ಹೆರಿಗೆ ಮಾಡಿದ್ದಾರೆ. ಈ ಸಂದರ್ಭ ಬಾಣಂತಿಗೆ ತೀವ್ರ ರಕ್ತ ಸ್ರಾವವಾಗಿ ತೀರ ಅಸ್ವಸ್ಥ ಸ್ಥಿತಿಗೆ ತಲುಪಿದ್ದರು. ಈ ವೇಳೆ ಅಲ್ಲಿನ ವೈದ್ಯರೇ ಬಾಣಂತಿಯನ್ನು ಬೇರೆ ಆಸ್ಪತ್ರೆಗೆ ದಾಖಲಿಸಿ ಬಳಿಕ ಬೆಂಗಳೂರಿನ ಕೆಂಗೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ(ಜು.29) ಬಾಣಂತಿ ಮೃತಪಟ್ಟಿದ್ದು, ಇದಕ್ಕೆ ವೈದ್ಯರೇ ನೇರ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

Leave a Reply

Your email address will not be published.