ಕೊನೆಗೂ ಹೊರಬಿತ್ತು ಬಿಗ್ ಬಾಸ್ ಕಂಟೆಸ್ಟೆಂಟ್ ಲೀಸ್ಟ್: ದೊಡ್ಮನೆ ಒಳಗೆ ಕಾಲಿಡ್ತಿರೋ ಸೆಲೆಬ್ರಿಟಿಗಳು ಇವರೇ ನೋಡಿ

ಚಲನಚಿತ್ರ

ಬಿಗ್ ಬಾಸ್ ಟಿವಿ ಶೋಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಇದೇ ಸೆಪ್ಟೆಂಬರ್ 24ಕ್ಕೆ ರಂದು ಅದ್ದೂರಿಯಾಗಿ ಶೋ ಆರಂಭವಾಗಲಿದ್ದು ಯಾರೆಲ್ಲಾ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ತಾರೆ ಎಂಬ ಕ್ಯೂರಿಯಾಟಿಸಿ ಕ್ರಿಯೇಟ್ ಆಗಿದೆ. ಸದ್ಯ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಜೋರಾರಿಯೇ ಚರ್ಚೆ ಶುರುವಾಗಿದೆ.

ಬಿಗ್ ಬಾಸ್ ಓಟಿಟಿ ಮುಗಿದು, ಸೀಸನ್ 9ಕ್ಕೆ ಫ್ಯಾನ್ಸ್ ಕಾತರದಿಂದ ಕಾಯ್ತಿದ್ದಾರೆ. ಈಗಾಗ್ಲೆ ಓಟಿಟಿಯಲ್ಲಿ ಗಮನ ಸೆಳೆದಿರುವ ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ಸಾನ್ಯ ಅಯ್ಯರ್, ಆರ್ಯವರ್ಧನ್ ಗುರೂಜಿ ಬಿಗ್ ಬಾಸ್ ಸೀಸನ್ 9ರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇವರ ಜೊತೆ ಸ್ಯಾಂಡಲ್‌ವುಡ್‌ನಲ್ಲಿ ಸಾಕಷ್ಟು ಸಿನಿಮಾಗಳ ಮೂಲಕ ಛಾಪೂ ಮೂಡಿಸಿರುವ ನಟಿ ಪ್ರೇಮ ಬಿಗ್ ಬಾಸ್ ಮನೆಗೆ ಬರ್ತಿದ್ದಾರೆ. ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿರುವ ಪ್ರೇಮಾ ಇದೀಗ ಮತ್ತೆ ಗಾಂಧಿನಗರಕ್ಕೆ ಎಂಟ್ರಿಕೊಟ್ಟಿದ್ದು ಈ ಮಧ್ಯೆ ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಬರ್ತ್‌ಡೇ ಸಾಂಗ್ ಹೇಳುವ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದ ಕಾಫಿನಾಡು ಚಂದು ಬಿಗ್ ಬಾಸ್‌ಗೆ ಮನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. `ಕಮಲಿ’ ಸೀರಿಯಲ್ ಖ್ಯಾತಿಯ ಅಮೂಲ್ಯ ಗೌಡ ಮತ್ತು ʻಮುದ್ದುಮಣಿಗಳುʼ ಖ್ಯಾತಿಯ ಸಮೀಕ್ಷಾ ಕೂಡ ಈ ಶೋನಲ್ಲಿ ಭಾಗವಹಿಸಲಿದ್ದಾರೆ.ʻಗಿಚ್ಚಿ ಗಿಲಿಗಿಲಿʼ ಖ್ಯಾತಿಯ ಪ್ರಿಯಾಂಕ ಕಾಮತ್ ಹಾಗೂ ದಿವ್ಯ ವಸಂತ ಕೂಡ ಇರಲಿದ್ದಾರೆ.

ಮಜಾ ಭಾರತ ಶೋ ಮೂಲಕ ಮೋಡಿ ಮಾಡಿರುವ ಚಂದ್ರಪ್ರಭ ಮತ್ತು ರಾಘವೇಂದ್ರ ಸರಿಗಮಪ ಶೋನ ಗಾಯಕಿ ಆಶಾ ಭಟ್ ಕೂಡ ಬಿಗ್ ಬಾಸ್ ಮನೆಗೆ ಎಂಟ್ರಿಕೊಡ್ತಿದ್ದಾರೆ.  ವೀಕ್ಷಕರು ಸಾಕಷ್ಟು ಕಾತರದಿಂದ ಕಾಯ್ತಿರುವ ಬಿಗ್ ಬಾಸ್ ಸೀಸನ್ 9 ಸೆಪ್ಟೆಂಬರ್ 24ರಂದಿ ಗ್ರ್ಯಾಂಡ್ ಲಾಂಚ್ ಆಗಲಿದೆ.