ಮುಂದಿನ ವರ್ಷದಿಂದ ರಾಜ್ಯದಲ್ಲಿ ಒಂದೇ ಸಿಇಟಿ ಮಾಡಲಾಗುವುದು: ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ

ಬೆಂಗಳೂರು

ಬೆಂಗಳೂರು: ಒಪ್ಪಂದ ಆದ ಮೇಲೆ ಮುಂದಿನ ವರ್ಷದಿಂದ ಒಂದೇ ಸಿಇಟಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷದಿಂದ ಯಥಾಸ್ಥಿತಿಯಲ್ಲಿದ್ದ ಎಂಜಿನಿಯರಿಂಗ್ ಶಿಕ್ಷಣ ಶುಲ್ಕವನ್ನು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಹೊರೆಯಾಗದಂತೆ ಕೇವಲ ಶೇ.10ರಷ್ಟು ಮಾತ್ರ ಹೆಚ್ಚಿಸಲು ನಿರ್ಧರಿಸಲಾಗಿದೆ. ಶೇ.25ರಷ್ಟು ಶುಲ್ಕ ಏರಿಕೆ ಮಾಡಬೇಕೆಂಬ ಕ್ಯುಪೇಕಾ ಬೇಡಿಕೆ ಕಾರ್ಯಸಾಧುವಲ್ಲ ಎನ್ನುವುದನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಖಾಸಗಿ ಕಾಲೇಜುಗಳು ದುಬಾರಿ ಶುಲ್ಕದ ಮ್ಯಾನೇಜ್ಮೆಂಟ್ ಸೀಟುಗಳಿಗಾಗಿ ತಾವೇ ನಡೆಸುತ್ತಿರುವ ಕಾಮೆಡ್-ಕೆ ಪರೀಕ್ಷೆಯನ್ನು ನಿಲ್ಲಿಸುವ ಸುಳಿವು ನೀಡಿವೆ. ಇದರ ಸಾಧ್ಯತೆಗಳನ್ನು ಪರಿಶೀಲಿಸಲು ಉನ್ನತ ಸಮಿತಿ ರಚಿಸಲಾಗುವುದು. ಇದನ್ನು ಆಧರಿಸಿ, ಕ್ಯುಪೇಕಾ ಜತೆ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ತೀರ್ಮಾನಸಲಾಗುವುದು ಎಂದು ಹೇಳಿದರು.

Leave a Reply

Your email address will not be published.