ಹೃದಯ ಸಮಸ್ಯೆ ಹಿನ್ನಲೆ: ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಮುರುಘಾಶ್ರೀ ಶಿಫ್ಟ್

ಜಿಲ್ಲೆ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಜೈಲಿನಲ್ಲಿರುವ ಮುರುಘಾ ಮಠದ ಮುರುಘಾ ಶ್ರೀಗಳಿಗೆ ಹೃದಯ ಸಮಸ್ಯೆ ಎದುರಾಗಿದೆ.ನ್ಯಾಯಾಂಗ ಬಂಧನದಲ್ಲಿರುವ ಸ್ವಾಮೀಜಿಗೆ ಹೃದಯ ಸಮಸ್ಯೆ ಎದುರಾಗಿದ್ದು, ಮುರುಘಾ ಶ್ರೀಗಳ ಪರ ವಕೀಲರು ಮನವಿ ಮಾಡಿದ ಹಿನ್ನೆಲೆಯಲ್ಲಿ,

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಕೋರ್ಟ್ ಸೂಚನೆ ನೀಡಿದೆ. ಕೊರೋನರಿ ಆಂಜಿಯೋಗ್ರಾಂಗೆ ಶ್ರೀಗಳ ಪರ ವಕೀಲರು ಮನವಿ ಮಾಡಿದ್ದರು. ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಪೊಲೀಸ್ ವ್ಯಾನ್ ನಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶ್ರೀಗಳನ್ನು ಕರೆದುಕೊಂಡು ಹೋಗಲಾಗಿದೆ.