ಪತಿ ವಿರುದ್ಧ ಕೊಲೆ ಯತ್ನದ ದೂರು ನೀಡಿದ ಮಹಾನಗರ ಪಾಲಿಕೆ ಸದಸ್ಯೆ

ಜಿಲ್ಲೆ

ಹುಬ್ಬಳ್ಳಿ: ಪತಿ ತನ್ನ ಮೇಲೆ ದೌರ್ಜನ್ಯ ಎಸಗಿದಲ್ಲದೇ ಕುತ್ತಿಗೆ ಹಿಸುಕಿ ಕೊಲೆ ಮಾಡಲು ಪ್ರಯತ್ನಿಸಿದ್ದಾರೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯೆ ಶ್ರುತಿ ಚಲವಾದಿ ಪತಿ ಸಂತೋಷ್ ಸಂತೋಷ ವಿರುದ್ಧ ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪತಿ ಮನೆ ಬಿಟ್ಟು ಹೋಗು ಎಂದು ಅವಾಚ್ಯ ಶಬ್ದಗಳಿಂದ ನನ್ನನ್ನು ನಿಂದಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ನಿನ್ನನ್ನು ಮತ್ತು ನಿಮ್ಮ ಅಣ್ಣನನ್ನು ಹುಡುಗರನ್ನು ಕರೆಯಿಸಿ ಕೊಲೆ ಮಾಡಿಸುತ್ತೇನೆಂದು ಬೆದರಿಕೆ ಹಾಕಿ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದರು ಎಂದು ಶ್ರುತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಶ್ರುತಿ ನೀಡಿರುವ ದೂರಿನ ಆಧಾರದ ಮೇಲೆ ಕೇಶ್ವಾಪುರ ಠಾಣೆ ಪೊಲೀಸರು ಸಂತೋಷನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ವಶಕ್ಕೆ ಒಪ್ಪಿಸಿದ್ದಾರೆ. ಸಂತೋಷ್ ಚಲವಾದಿ ಈ ಹಿಂದೆ ಕೇಶ್ವಾಪುರದ ವಿನಯ ಪಿಳ್ಳೆ ಮತ್ತು ಕುಮಾರ ಪಿಳ್ಳೆ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ. ಇತ್ತೀಚೆಗಷ್ಟೇ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಗೆ ಬಂದಿದ್ದು, ಇದೀಗ ಮತ್ತೆ ಜೈಲು ಪಾಲಾಗಿದ್ದಾನೆ.

 

Leave a Reply

Your email address will not be published.