Home Home ಕನ್ನಡ ಚಿತ್ರರಂಗದ ಹಿರಿಯ ನಟ ಕೃಷ್ಣೇಗೌಡ ನಿಧನ….!

ಕನ್ನಡ ಚಿತ್ರರಂಗದ ಹಿರಿಯ ನಟ ಕೃಷ್ಣೇಗೌಡ ನಿಧನ….!

ಕನ್ನಡ ಚಿತ್ರರಂಗದ ಹಿರಿಯ ನಟ ಕೃಷ್ಣೇಗೌಡ ನಿಧನ….!

2411
0
SHARE

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ, ರಂಗಭೂಮಿ ಕಲಾವಿದ ಕೃಷ್ಣೇ ಗೌಡ ಇಂದು ನಿಧನರಾಗಿದ್ದಾರೆ. ವಿಶಿಷ್ಟ ಅಭಿನಯದ ಮೂಲಕ ಚಾಪು ಮೂಡಿಸಿದ್ದ ಹಿರಿಯ ನಟ ಕೃಷ್ಣೇ ಗೌಡ ಇಂದು ಬೆಳಗ್ಗಿನ ಜಾವ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.


 

ಕಳೆದ ಒಂದು ತಿಂಗಳ ಹಿಂದಷ್ಟೇ ಕೃಷ್ಣೇ ಗೌಡರಿಗೆ ಕೊರೊನಾ ಸೋಂಕು ತಗುಲಿತ್ತು. ನಂತರ ಅವರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಹೃದಯಘಾತದಿಂದ ನಿಧನ ಹೊಂದಿದ್ದಾರೆ.

ಅಂದಹಾಗೇ ಕೃಷ್ಣೇಗೌಡ, ಕರ್ನಾಟಕ ರಾಜ್ಯದ ಅಕೌಂಟೆಂಟ್ ಜನರಲ್ ಕಚೇರಿಯಲ್ಲಿ ಉದ್ಯೋಗದಲ್ಲಿದ್ದುಕೊಂಡು ರಂಗಭೂಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವರು. ಅಬ್ಬೂರು ಜಯತೀರ್ಥ, ಆರ್.ನಾಗೇಶ್, ಶ್ರೀನಿವಾಸ ಪ್ರಭು, ಡಾ.ಬಿ.ವಿ.ರಾಜಾರಾಂ ಮುಂತಾದ ನಿರ್ದೇಶಕರುಗಳ ನಿರ್ದೇಶನದಲ್ಲಿ ಅಭಿನಯಿಸಿದ್ದರು.

ಮುಖ್ಯ ಮಂತ್ರಿ ನಾಟಕದಲ್ಲಿನ ಪಾತ್ರ ಇವರಿಗೆ ಖ್ಯಾತಿ ತಂದಿತ್ತು. ಚಿತ್ರರಂಗದಲ್ಲಿ ಪೋಷಕ ನಟನೆಗೆ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದಿದ್ದರು. ಕೃಷ್ಣೇ‌ಗೌಡರು ಕ್ರೀಡಾ ಕ್ಷೇತ್ರದಲ್ಲೂ ಹೆಸರು ಮಾಡಿದ್ದವರು. ಅವರು ರಾಜ್ಯ ಮಟ್ಟದ ಉತ್ತಮ ವಾಲಿಬಾಲ್ ಪಟು ಆಗಿದ್ದವರು.

LEAVE A REPLY

Please enter your comment!
Please enter your name here