
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶ್ರೀಮಂತ ಪಾಟೀಲ್ ಚಾಲನೆ
ಬೆಳಗಾವಿ: ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಾವತಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಶ್ರೀಮಂತ ಪಾಟೀಲ್ ಚಾಲನೆ ನೀಡಿದರು
೪೦ ಲಕ್ಷ ರೂಪಾಯಿ ವೆಚ್ಚದಲ್ಲಿ ಮಂಗಾವತಿ, ಉಗಾರ ಬುದ್ರುಕ್, ಶಿರಗುಪ್ಪಿ, ಜುಗುಳ ರಸ್ತೆ ಸುಧಾರಣೆ ಕಾಮಗಾರಿ, ಜುಗುಳ ಗ್ರಾಮದಲ್ಲಿ 72 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಆರು ಶಾಲಾ ಕೊಠಡಿಗಳ ಉದ್ಘಾಟನೆ ಮತ್ತು ೧೭ ಲಕ್ಷ ರೂಪಾಯಿ ವೆಚ್ಚದ ಒಂದು ಅಂಗನವಾಡಿ ಕೇಂದ್ರ ಉದ್ಘಾಟನೆ ಮಾಡಿದರು
ಶಿರಗುಪ್ಪಿ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಜನರ ಅಹವಾಲನ್ನು ಸ್ವೀಕರಿಸಿದರು. ಬಳಿಕ ೨೫ ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ಚರಂಡಿ ನಿರ್ಮಾಣ, ೧೨ ಲಕ್ಷ ರೂಪಾಯಿ ವೆಚ್ಚದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ಹಾಗೂ ಉಗಾರ ಬುದ್ರುಕ ಗ್ರಾಮದಲ್ಲಿ ೨೫ ಲಕ್ಷ ರೂಪಾಯಿ ಎಸ್ಸಿ ಕಾಲೋನಿಯಲ್ಲಿ ಚರಂಡಿ ಹಾಗೂ ರಸ್ತೆ ನಿರ್ಮಾಣದ ಕಾಮಗಾರಿ ಮತ್ತು ಉಗಾರ ಖುರ್ದ ಪಟ್ಟಣದಲ್ಲಿ ಕೃಷ್ಣಾ ಘಾಟ ಹತ್ತಿರ ಸಾರ್ವಜನಿಕ ಉದ್ಯಾನವನ ಲೋಕಾರ್ಪಣೆಗೊಳಿಸಿದರು
ಬಳಿಕ ಮಾತನಾಡಿದ ಅವರು ಕಾಗವಾಡ ಮತಕ್ಷೇತ್ರದಲ್ಲಿ ಯಾವದೇ ರಸ್ತೆಗಳು ಅಭಿವೃದ್ಧಿಯಾಗದೇ ಹಿಂದುಳಿಯಬಾರದೆಂದು ಕ್ಷೇತ್ರದ ಎಲ್ಲ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದು ಕಾಮಗಾರಿಗಳನ್ನ ಪ್ರಾರಂಭ ಮಾಡುತ್ತಿದ್ದೇನೆ ಇದರ ಜೊತೆಗೆ ಶಾಲಾ ಮಕ್ಕಳ ಅನುಕೂಲಕ್ಕಾಗಿ ಕ್ರೀಡಾ ಸಾಮಗ್ರಿ,ಕುಡಿಯುವ ನೀರಿನ ವ್ಯವಸ್ಥೆ,ಸುಸಜ್ಜಿತ ಅಂಗನವಾಡಿ ಕಟ್ಟಡ ಹಾಗೂ ಶಾಲಾ ಕಟ್ಟಡಗಳನ್ನು ನಿರ್ಮಿಸಲಾಗಿದೆ ಅಷ್ಟೇ ಅಲ್ಲದೇ ಭವನಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಒಟ್ಟಾರೆ ಕ್ಷೇತ್ರ ಅಭಿವೃದ್ದಿಗಾಗಿ ಬೇಕಾದ ಎಲ್ಲ ಸೌಲಭ್ಯಗಳನ್ನು ಕ್ಷೇತ್ರಕ್ಕೆ ತಂದಿದ್ದೇನೆ ಇನ್ನೂ ಹೆಚ್ಚಿನ ಅಭಿವೃದ್ಧಿಗಾಗಿ ಅನುದಾನ ತರುತ್ತೆನೆ ಎಂದರು.