ಗೃಹಮಂತ್ರಿ ಸಮಾಜ ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ -ಮೊಹಮ್ಮದ್ ನಲಪಾಡ್ ಕಿಡಿ

ಬೆಂಗಳೂರು

ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆಗೆ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಿವೇಕಿ ಗೃಹಮಂತ್ರಿ, ಸಮಾಜ ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಪದೇ ಪದೇ ತಪ್ಪು ಮಾಡುತ್ತಿದ್ದಾರೆ, ಕೋಮಗಲಭೆ ಸೃಷ್ಟಿ ಮಾಡುವಂತಹ ಕೆಲಸ ಮಾಡುತ್ತಿದ್ದಾರೆ. ಮಾತನಾಡುವ ಮುಂಚೆ ಯೋಚನೆ ಮಾಡಬೇಕು, ಗೃಹ ಸಚಿವರಿಗೆ ಕಾಮನ್ ಸೆನ್ಸ್ ಇಲ್ಲ. ಗೃಹ ಸಚಿವರು ರಾಜೀನಾಮೆ ನೀಡಬೇಕು, ಪೊಲೀಸ್ ಇಲಾಖೆ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಯುವಕರು ಪ್ರತಿಭಟನೆಗೆ ಬರೆದಂತೆ ಬೆದರಿಕೆ ಹಾಕುತ್ತಿದ್ದಾರೆ, ಪ್ರತಿಭಟನೆ ಮಾಡುವುದು ನಮ್ಮ ಹಕ್ಕು ಎಂದು ವಾಗ್ಡಾಳಿ ನಡೆಸಿದ್ದಾರೆ

Leave a Reply

Your email address will not be published.