ಅಜ್ಞಾತ ಸ್ಥಳದಿಂದ ಆಂಗ್ ಸಾನ್ ಸೂಕಿ ಜೈಲಿಗೆ ಸ್ಥಳಾಂತರ

ಅಂತರಾಷ್ಟ್ರೀಯ

ಯಾಂಗೋನ್: ರಹಸ್ಯ ಸ್ಥಳದಲ್ಲಿ ಗೃಹ ಬಂಧನದಲ್ಲಿದ್ದ ಉಚ್ಚಾಟಿತ ಮ್ಯಾನ್ಮಾರ್ ನಾಯಕಿ ಆಂಗ್ ಸಾನ್ ಸೂಕಿ ಅವರನ್ನು ಮ್ಯಾನ್ಮಾರ್‌ ರಾಜಧಾನಿ ನೇಪಿಡಾವ್‌ನಲ್ಲಿರುವ ಜೈಲಿಗೆ ಸ್ಥಳಾಂತರಿಸಲಾಗಿದೆ ಎಂದು ಜುಂಟಾ ವಕ್ತಾರರು ಹೇಳಿದ್ದಾರೆ.

ಕಳೆದ ವರ್ಷ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿದ್ದ ಆಂಗ್ ಸಾಣ್ ಸೂಕಿ ಅವರನ್ನು ಪದಚ್ಯುತಗೊಳಿಸಿ ಸೇನೆ ದೇಶವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡಿತ್ತು. ನಂತರ ಭ್ರಷ್ಟಾಚಾರ ಆರೋಪದ ಮೇಲೆ ಸೂಕಿ ಅವರನ್ನು ವಶಕ್ಕೆ ಪಡೆದ ಸೇನೆ ನೇಪಿಡಾವ್‌ನಲ್ಲಿ ಅಜ್ಞಾತ ಸ್ಥಳದಲ್ಲಿ ಗೃಹಬಂಧನದಲ್ಲಿರಿಸಲಾಗಿತ್ತು.

ಇದುವರೆಗೂ ಗೌಪ್ಯ ಕಾರಾಗೃಹದಲ್ಲಿ ಇರಿಸಲಾಗಿದ್ದ ಆಂಗ್‌ ಸಾನ್‌ ಸೂಕಿ ಅವರನ್ನು ಇದೀಗ ಜೈಲಿಗೆ ಸ್ಥಳಾಂತರಿಸಲಾಗಿದೆ ಎಂದು ಕಾನೂನು ಅಧಿಕಾರಿಗಳು ತಿಳಿಸಿದ್ದಾರೆ. ಸೂಕಿ ಅವರ ವಿರುದ್ಧದ ಕೋರ್ಟ್ ಪ್ರಕರಣಗಳ ವಿಚಾರಣೆಯು ಕಾರಾಗೃಹ ಆವರಣದಲ್ಲಿ ನಿರ್ಮಿಸಲಾಗಿರುವ ಕಟ್ಟಡದಲ್ಲಿ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published.