ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣ: ಇಂದು ಜಾಮೀನು ಅರ್ಜಿಯ ಆದೇಶ

ಜಿಲ್ಲೆ

ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಇದರ ವಾದ – ಪ್ರತಿವಾದ ಈಗಾಗಲೇ ಪೂರ್ಣಗೊಂಡಿದೆ.

ಚಿತ್ರದುರ್ಗ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಇಂದು ಜಾಮೀನು ಅರ್ಜಿಯ ಕುರಿತು ಆದೇಶ ಹೊರಡಿಸಲಿದ್ದು, ಮುರುಘಾ ಶ್ರೀಗಳಿಗೆ ಜಾಮೀನು ಸಿಗಲಿದೆಯಾ ಅಥವಾ ಜೈಲುವಾಸ ಮುಂದುವರೆಯಲಿದೆಯಾ ಎಂಬ ಕುತೂಹಲ ಮೂಡಿದೆ.

ಇದರ ಮಧ್ಯೆ ಬುಧವಾರದಂದು ಶಿವಮೂರ್ತಿ ಮುರುಘಾ ಶರಣರನ್ನು ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಗುರುವಾರ ಕೊರೊನರಿ ಎಂಜಿಯೋಗ್ರಾಂ ನಡೆಸಲಾಗಿದ್ದು, ಯಾವುದೇ ಸಮಸ್ಯೆಗಳು ಇರುವುದು ಕಂಡುಬಂದಿಲ್ಲ