Home District ಚುನಾವಣೆ ನಂತರ ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಪಕ್ಷದಿಂದ ಹೊರ ಹಾಕಲಾಗುತ್ತದೆ; ನಳೀನ್ ಕುಮಾರ್ ಕಟೀಲ್ ಭವಿಷ್ಯ

ಚುನಾವಣೆ ನಂತರ ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಪಕ್ಷದಿಂದ ಹೊರ ಹಾಕಲಾಗುತ್ತದೆ; ನಳೀನ್ ಕುಮಾರ್ ಕಟೀಲ್ ಭವಿಷ್ಯ

442
0

ರಾಯಚೂರು: ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳು ಕೋವಿಡ್ ನಿಯಂತ್ರಣ ಮಾಡಿರುವ ವಿಧಾನವು ಎಲ್ಲವೂ ಅತ್ಯುತ್ತಮವಾಗಿ ನಿರ್ಮಾಣಗೊಂಡಿರುವುದು ಬಿಜೆಪಿ-3 ಕ್ಷೇತ್ರದಲ್ಲಿ ಗೆಲುವಿಗೆ ಸಾಧ್ಯವಾಗುತ್ತದೆ. ಮಂಗಳ ಅಂಗಡಿಯವರನ್ನು ಬೆಳಗಾವಿಯಲ್ಲಿ ಸಿದ್ದರಾಮಯ್ಯ ಅವರು ಅನಾನುಭವಿ ಎಂದು ಅವಮಾನಿಸಿದ್ದಾರೆ ಹಾಗಾದರೆ ಕಾಂಗ್ರೆಸ್ನ ಪ್ರಿಯಾಂಕಾ ಗಾಂಧಿಗೆ ಯಾವ ಅನುಭವಿದೆ ಕಾಂಗ್ರೆಸ್ ನಲ್ಲಿ ಆಂತರಿಕ ಭಯವಿದೆ. ಅತಂತ್ರದಿಂದ ಮಾತನಾಡುತ್ತಿದ್ದಾರೆ. ಚುನಾವಣೆ ನಂತರ ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ನಿಂದ ಹೊರ ಹಾಕಲಾಗುತ್ತದೆ ಹೀಗಾಗಿ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳಿಕೊಂಡು ತಿರುಗುತ್ತದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಹೇಳಿದರು.

ಅವರಿಂದು ಮಸ್ಕಿಯ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಯಡಿಯೂರಪ್ಪ ಅವರ ಕೊಡುಗೆ ಅಪಾರ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ನೀರಾವರಿ ಯೋಜನೆ ವಿವಿಧ ರೀತಿಯ ಯೋಜನೆಗಳನ್ನು ನೀಡಿದ್ದಾರೆ ಪ್ರತಾಪ್ ಗೌಡ ಪಾಟೀಲರು ಶಾಸಕರಲ್ಲದಿದ್ದರು ಕ್ಷೇತ್ರಕ್ಕೆ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದಾರೆ ಬಿಜೆಪಿ ಸಂಘಟನಾತ್ಮಕವಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದು ಬೂತ್ ಮಟ್ಟದಲ್ಲಿ ಗೆಲುವು ಸಾಧಿಸಲಿದೆ ಎಂದರು.

ಸಿದ್ದರಾಮಯ್ಯನವರ ಹಣ ಹಂಚಿಕೆ ವಿಚಾರವಾಗಿ ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯಲ್ಲಿ ಚುನಾವಣೆಯನ್ನು ಯಾವ ರೀತಿ ನಡೆಸಿದ್ದಾರೆ ಎಂಬುದು ಜನತೆಗೆ ಗೊತ್ತಿದೆ ಹಣ ಚೀಲದಲ್ಲಿ ತಂದರು ದೋಣಿಯಲ್ಲಿ ತಂದರು ಎನ್ನುವುದಕ್ಕೆ ಆದರೆ ನೀಡಲಿ ಎಂದು ತಿರುಗೇಟು ನೀಡಿದರು.ಕಾಂಗ್ರೆಸ್ನವರು ಅಧಿಕಾರ ಇದ್ದಾಗ ಹಣದ ಮದದಿಂದ ಚುನಾವಣೆಯ ಎದುರಿಸುತ್ತಾರೆ ಅಧಿಕಾರ ಇಲ್ಲದಿದ್ದಾಗ ಕುತಂತ್ರ ಮಾಡುತ್ತಾರೆ 2023ಕ್ಕೆ ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ನಿಂದ ಹೊರ ಹಾಕಿ ಅಡ್ರೆಸ್ಸ್ ಇಲ್ಲದಂತೆ ಮಾಡುತ್ತಾರೆ ಎಂದು ತಿರುಗೇಟು ನೀಡಿದರು.

ದೇಶದಲ್ಲಿ ಐದು ರಾಜ್ಯಗಳಲ್ಲಿ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ.ಯಾತ್ನಳ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಮಾತನಾಡಿ ಪಕ್ಷ ಸಿದ್ಧಾಂತಗಳಲ್ಲಿ ಬಿ ಫಾರಂ ಪಡೆದು ಚುನಾವಣೆಯಲ್ಲಿ ಗೆದ್ದಾಗ ಅವರಿಗೆ ಮೊದಲು ನೋಟಿಸ್ ನೀಡಬೇಕಾಗುತ್ತದೆ ನೋಟೀಸಿಗೆ ಉತ್ತರ ನೀಡದಿದ್ದರೆ ಮುಂದಿನ ಕ್ರಮ ಕೈಗೊಳ್ಳಲು ಅವಕಾಶವಿರುತ್ತದೆ ಹಾಗಾಗಿ ಈಗಾಗಲೇ ಅವರಿಗೆ ನೋಟಿಸ್ ನೀಡಲಾಗಿದೆ ಉತ್ತರ ನೀಡದಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು

Previous articleನಿಧಿ ಸಂಗ್ರಹಕ್ಕಾಗಿ ಫ್ಯಾಷನ್ ಶೋ!
Next articleರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನಲೆ; ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ!

LEAVE A REPLY

Please enter your comment!
Please enter your name here