Home Home ಕೃಷ್ಣಾ ನದಿಗೆ ಪ್ರವಾಹದ ಭೀತಿ ನದಿ ತೀರದಲ್ಲಿ NDF ತಂಡ ನಿಯೋಜನೆ

ಕೃಷ್ಣಾ ನದಿಗೆ ಪ್ರವಾಹದ ಭೀತಿ ನದಿ ತೀರದಲ್ಲಿ NDF ತಂಡ ನಿಯೋಜನೆ

ಕೃಷ್ಣಾ ನದಿಗೆ ಪ್ರವಾಹದ ಭೀತಿ ನದಿ ತೀರದಲ್ಲಿ NDF ತಂಡ ನಿಯೋಜನೆ | NDF team deployed on the banks of River Krishna |

438
0
SHARE

ಚಿಕ್ಕೋಡಿ ತಾಲೂಕಿನ ನದಿಗಳಿಗೆ ಪ್ರವಾಹ ಭೀತಿ ಹಿನ್ನೆಲೆಯಲ್ಲಿ ನದೀತೀರದಲ್ಲಿ ಮುಂಜಾಗ್ರತಾ ಕ್ರಮವಾಗಿ ಎನ್ ಡಿ ಆರ್ ಎಫ್ ತಂಡ ನಿಯೋಜನೆ ಮಾಡಲಾಗಿದೆ.

ಕೊರೊನಾ ಆತಂಕದ ನಡುವೆಯೂ ಚಿಕ್ಕೋಡಿ ತಾಲೂಕಿನ ನದಿಗಳಿಗೆ ಪ್ರವಾಹದ ಪರಿಸ್ಥಿತಿ ಎದುರಾಗುತ್ತಿದೆ. ಹೀಗಾಗಿ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಮುಂಜಾಗ್ರತಾ ಕ್ರಮವಾಗಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಾಗಿದೆ. ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಕೃಷ್ಣಾ ನದಿ ತೀರದಲ್ಲಿ 21 ಜನರ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ನಿಯೋಜಿಸಲಾಗಿದೆ. ಸದ್ಯ ಈ ತಂಡವು ನಿನ್ನೆಯ ದಿನ ಸಾಯಂಕಾಲ ಸಮಯದಲ್ಲಿ ಯಡೂರ ಗ್ರಾಮಕ್ಕೆ ಈ ಎನ್ ಡಿ ಆರ್ ಎಫ್ ತಂಡ ಆಗಮಿಸಿದೆ.

ಇಲ್ಲಿಯ ಸಿದ್ಧ ತೀರ್ಥ ಯಾತ್ರಿ ನಿವಾಸದಲ್ಲಿ ಬೀಡುಬಿಟ್ಟಿದ್ದಾರೆ. ಸದ್ಯ ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಪ್ರಾರಂಭವಾಗಿದೆ. ಹೀಗಾಗಿ ಚಿಕ್ಕೋಡಿ ತಾಲೂಕಿನ ಕೃಷ್ಣಾ, ವೇದಗಂಗಾ, ದೂಧಗಂಗಾ ನದಿಗಳಿಗೆ ಸಣ್ಣ ಪ್ರಮಾಣದಲ್ಲಿ ನೀರು ಏರಿಕೆಯಾಗುತ್ತಿದೆ. ಇದು ಪ್ರವಾಹದ ಮುನ್ಸೂಚನೆಯನ್ನು ನೀಡುತ್ತಿದ್ದು, ಈ ಕಾರಣಕ್ಕಾಗಿ ಯಾವುದೇ ಪ್ರಾಣ ಹಾನಿ ಆಗದಂತೆ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಮುಂಜಾಗ್ರತಾ ಕ್ರಮವಾಗಿ ಈ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ನಿಯೋಜಿಸಲಾಗಿದೆ.

LEAVE A REPLY

Please enter your comment!
Please enter your name here