ನೋಯ್ಡಾ ಹೌಸಿಂಗ್‌ ಸೊಸೈಟಿ ಕಾಮಗಾರಿ ವೇಳೆ ಅವಘಡ: ನಾಲ್ವರ ಸಾವು

ರಾಷ್ಟ್ರೀಯ

ನೋಯ್ಡಾ: ಹೌಸಿಂಗ್ ಸೊಸೈಟಿಯ ಗೋಡೆಯ ಒಂದು ಕುಸಿದು ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 9 ಮಂದಿ ಗಾಯ ಗೊಂಡಿರುವ ಬಗ್ಗೆ ವರದಿಯಾಗಿದೆ. ಸ್ಥಳದಲ್ಲಿ ರಕ್ಷಣ ಕಾರ್ಯ ಮುಂದುವರಿದಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಳಿಸರು ಘಟನಾ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಘಟನೆ ಕುರಿತು ಸಿಎಂ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದಾರೆ. ರಕ್ಷಣಾ ಕಾರ್ಯವನ್ನ ತ್ವರಿತಗತಿಯಲ್ಲಿ ಮಾಡುವಂತೆ ಅಧಿಕಾರಿಗಳಿಗೆ ಯೋಗಿ ಆದಿತ್ಯನಾಥ್‌ ಸೂಚಿಸಿದ್ದಾರೆ.

ಘಟನೆ ಬಗ್ಗೆ ಮಾತನಾಡಿದ ನೋಯ್ಡಾದ ಜಿಲ್ಲಾಧಿಕಾರಿ ಸುಹಾಸ್ ಎಲ್‌.ವೈ ‘ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಗಾಯಾಳುಗಳ ವಿವರವನ್ನ ಪಡೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸೆಕ್ಟರ್ 21ರ ಜಲ ವಾಯು ವಿಹಾರ್ ಬಳಿ ನೋಯ್ಡಾ ಪ್ರಾಧಿಕಾರ ಒಳಚರಂಡಿ ದುರಸ್ತಿ ಕಾಮಗಾರಿಯ ಗುತ್ತಿಗೆ ನೀಡಿತ್ತು. ಕಾರ್ಮಿಕರು ಕಟ್ಟಡದ ಇಟ್ಟಿಗೆಗಳನ್ನು ತೆಗೆಯುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಜಿಲ್ಲಾ ಆಸ್ಪತ್ರೆ ಮತ್ತು ಕೈಲಾಶ್ ಆಸ್ಪತ್ರೆಯಲ್ಲಿ ತಲಾ ಇಬ್ಬರು ಸಾವಿಗೀಡಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಘಟನೆಯಲ್ಲಿ ಇನ್ನು ಹೆಚ್ಚಿನ ಕಾರ್ಮಿಕರು ಗಾಯಗೊಂಡಿದ್ದಾರೆಂಬುದರ ಬಗ್ಗೆ ಮಾಹಿತಿ ಪಡೆಯಲಾಗುತಿದೆ.