ವಾಹನಗಳ ನಂಬರ್ ಪ್ಲೇಟ್ ಮೇಲೆ ಡೆಸಿಗ್ನೇಷನ್ ಹಾಕಂಗಿಲ್ಲ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು

ಬೆಂಗಳೂರು: ವಾಹನಗಳ ನಂಬರ್ ಪ್ಲೇಟ್ ಮೇಲೆ ಡೆಸಿಗ್ನೇಷನ್ ಹಾಕುವುದಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದ್ದು, ನೂತನ ನಿಯಮ ಜಾರಿಗೆ ತಂದಿದೆ. ಈ ಸಂಬಂಧ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯಿಂದ ಆದೇಶ ಹೊರಡಿಸಿದ್ದು, ಮೇ 24 ರೊಳಗೆ ಎಲ್ಲಾ ಬೋರ್ಡ್ ತೆರವು ಮಾಡಿ ವಾಹನ ರಸ್ತೆಗಿಳಿಸಬೇಕು. ನಿಯಮದ ಪ್ರಕಾರ ವಾಹನದ ನಂಬರ್ ಪ್ಲೇಟ್ ಮೇಲೆ ಯಾವುದೇ ಹೆಸರು, ಹುದ್ದೆ ಬಳಸುವಂತಿಲ್ಲ. ಡೆಡ್ ಲೈನ್ ಬಳಿಕ ನಾಮಫಲಕ ತೆರವುಗೊಳಿಸದಿದ್ರೆ ಕ್ರಮ ಕೈಗೊಳ್ಳಲಾಗುತ್ತದೆ.  ಅಂತಹ ವಾಹನ ಮಾಲೀಕರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published.