ಪೇಸಿಎಂ ಅಭಿಯಾನ ವಿರುದ್ಧ ಕೇಸ್ ದಾಖಲು; ಸಿಎಂ ಬೊಮ್ಮಾಯಿ ಹೇಳಿದ್ದೇನು.?

ಬೆಂಗಳೂರು

ಬೆಂಗಳೂರು: ಬೆಂಗಳೂರಿನಲ್ಲಿ PAY CM ಎಂಬ ಪೋಸ್ಟರ್ ಹಾಕಿದವರ ವಿರುದ್ಧ ಕೇಸ್ ಹಾಕಲು ಹೇಳಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಪದ್ಮನಾಭ ನಗರದಲ್ಲಿ ಮಾತನಾಡಿದ ಅವರು, ಇದರಿಂದ ನಮಗಿಂತಲೂ ರಾಜ್ಯದ ಜನರಿಗೆ ಕೆಟ್ಟ ಹೆಸರು ಬರುತ್ತೆ‌‌‌. ಆಧಾರ ರಹಿತವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಋಣಾತ್ಮಕ ಪ್ರಚಾರ ಮಾಡುತ್ತಿದ್ದಾರೆ.

ನನ್ನ ಹಾಗೂ ರಾಜ್ಯದ ಹೆಸರನ್ನು ಕೆಡಿಸಲು ಇಂತಹ ವ್ಯವಸ್ಥಿತ ಷಡ್ಯಂತ್ರಗಳು ನಡೆಯುತ್ತಿವೆ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ತಿಳಿಯಲು ಪ್ರಕರಣ ದಾಖಲಿಸಿ, ಸಮಗ್ರ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿದ್ದಾರೆ.