ನ.1ರಂದು ಪುನೀತ್ ರಾಜಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: CM ಬೊಮ್ಮಾಯಿ

ಬೆಂಗಳೂರು

ಬೆಂಗಳೂರು: ನವೆಂಬರ್ 1ಕ್ಕೆ ಪುನೀತ್ ರಾಜ್​ಕುಮಾರ್​ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಲಾಲ್ ಬಾಗ್ ನಲ್ಲಿ ಮಾತನಾಡಿದ ಅವರು, ಈ ವರ್ಷ ಡಾ.ರಾಜ್​ಕುಮಾರ್​ ಹಾಗೂ ಪುನೀತ್​ ರಾಜ್​ಕುಮಾರ್​ ಸ್ಮರಣಾರ್ಥವಾಗಿ ಮಾಡುತ್ತಿದ್ದಾರೆ. ಈ ಬಾರಿಯ ಪ್ಲವರ್ ಶೋ ಉತ್ತಮವಾಗಿದೆ. ಜನ ಈ ಬಾರಿ ಹೆಚ್ಚು ಸಂಖ್ಯೆಯಲ್ಲಿ ಬರಬೇಕು. ಈ ಬಾರಿ ನವೆಂಬರ್ 1ರಂದು ಪುನೀತ್​ ರಾಜ್​ಕುಮಾರ್​ಗೆ ಕರ್ನಾಟಕ ರತ್ನವನ್ನು ಕೊಡಲಿದ್ದೇವೆ. ಇದಕ್ಕಾಗಿ ತಯಾರಿಗೆ ಕಮಿಟಿ ರಚನೆ ಮಾಡಿದ್ದೇವೆ. ಡಾ.ರಾಜ್ ಕುಟುಂಬ ಸದಸ್ಯರು ಇರ್ತಾರೆ.

ನಮಗೆ ಕರ್ನಾಟಕ ರತ್ನ ನೀಡಲು ಸಂಭ್ರಮವಾಗುತ್ತಿದೆ ಎಂದು ಹೇಳಿದರು. ನಟ ಪುನೀತ್ ರಾಜ್ ಕುಮಾರ್ ನಿಧನದ ನಂತರ ಕರ್ನಾ ಟಕ ಸರ್ಕಾರವು ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ ಮಾಡಿತ್ತು. ಆದರೆ, ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿರಲಿಲ್ಲ. ಕೊನೆಗೂ ಆ ದಿನಾಂಕ ಘೋಷಣೆಯಾಗಿದ್ದು, ಕರ್ನಾಟಕ ರಾಜ್ಯೋತ್ಸವದ ಸಂಭ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಇಂದು ಉದ್ಘಾಟನೆ ಗೊಂಡ ಫಲ ಪುಷ್ಪ ಪ್ರದರ್ಶನದಲ್ಲಿ ಡಾ.ರಾಜ್ ಕುಮಾರ್ ಮತ್ತು ಅಪ್ಪು ನೆನಪಿನಲ್ಲಿ ವಿಶೇಷ ಪ್ರದರ್ಶನ ಆಯೋಜನೆ ಗೊಂಡಿದೆ. ಪುನೀತ್ ಮತ್ತು ಡಾ.ರಾಜ್ ಪುತ್ಥಳಿಗಳನ್ನು ಲಾಲ್ ಬಾಗ್ ನಲ್ಲಿ ಪ್ರತಿಷ್ಠಾಪಿಸಲಾಗಿದೆ.

Leave a Reply

Your email address will not be published.