ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 280ಕ್ಕೂ ಅಧಿಕ ಜನರ ಸಾವು

ಅಂತರಾಷ್ಟ್ರೀಯ

ಬೂಲ್: ಅಫ್ಘಾನಿಸ್ತಾನದ ಪೂರ್ವ ಪಕ್ಟಿಕಾ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪದಲ್ಲಿ 280 ಜನರು ಸಾವನ್ನಪ್ಪಿದ್ದು, 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಂಗಳವಾರ ರಾತ್ರಿ ಪಕ್ಟಿಕಾ ಮತ್ತು ಖೋಸ್ಟ್ ಪ್ರಾಂತ್ಯಗಳಲ್ಲಿ ಸಂಭವಿಸಿದ ಭೂಕಂಪದ ಪರಿಣಾಮ 280 ಜನರು ಸಾವನ್ನಪ್ಪಿದ್ದು, 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

 

ಯುಎಸ್ ಜಿಯೋಲಾಜಿಕಲ್ ಸರ್ವೆ(ಯುಎಸ್‍ಜಿಎಸ್) ಪ್ರಕಾರ, ಬುಧವಾರ ನಸುಕಿನ ವೇಳೆಯಲ್ಲಿ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಕೆಲವು ಭಾಗಗಳಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ. ಆಗ್ನೇಯ ಅಫ್ಘಾನಿಸ್ತಾನದ ಖೋಸ್ಟ್ ನಗರದಿಂದ ಸುಮಾರು 44 ಕಿಮೀ(27 ಮೈಲುಗಳು) ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್‍ಜಿಎಸ್ ಹೇಳಿದೆ.

Leave a Reply

Your email address will not be published.