ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ್ದು, ಕೇರಳಿಗರಲ್ಲ, ಸ್ಥಳೀಯರು: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಆರಗ ಜ್ಞಾನೇಂದ್ರ

ಬೆಂಗಳೂರು

ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ್ದು, ಕೇರಳಿಗರಲ್ಲ, ಸ್ಥಳೀಯರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು,  ಜುಲೈ.26ರಂದು ರಾತ್ರಿ ಪ್ರವೀಣ್ ನೆಟ್ಟಾರು ಕೊಲೆಯಾಗಿತ್ತು. ಬೆಳ್ಳಾರೆ ಗ್ರಾಮದಲ್ಲಿಯೇ ಹತ್ಯೆ ಮಾಡಲಾಗಿದೆ. ಕೊಂದವರು ಕೇರಳದವರು ಎನ್ನಲಾಗಿತ್ತು. ಆದ್ರೇ ಪ್ರವೀಣ್ ನೆಟ್ಟಾರು ಕೊಂದವರು ಸ್ಥಳೀಯರು, ಕೇರಳದವರು ಅಲ್ಲ ಎಂಬುದಾಗಿ ಸಚಿವರು ಹೇಳಿದ್ದಾರೆ.

ಅಂದಹಾಗೇ ದಕ್ಷಿಣ ಕನ್ನಡ ಜಿಲ್ಲೆಯ ನೆಟ್ಟಾರುವಿನಲ್ಲಿ ಪ್ರವೀಣ್ ಹತ್ಯೆಯಾದ ಬಳಿಕ, ಬೆಳ್ಳಾರೆಯಲ್ಲಿ ಬಂದ್ ಮಾಡಿ ಹಿಂದೂ ಸಂಘಟನೆಯ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೇ ಅನೇಕ ಕಾರ್ಯಕರ್ತರು ಬಿಜೆಪಿ ಸ್ಥಳೀಯ ಸಂಘಟನೆಗಳಿಗೆ ರಾಜೀನಾಮೆ ಕೂಡ ಘೋಷಣೆ ಮಾಡಿದ್ದರು. ಈ ಬೆನ್ನಲ್ಲೇ ಸ್ಪೋಟಕ ಮಾಹಿತಿಯನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಬಿಚ್ಚಿಟ್ಟಿದ್ದಾರೆ.

Leave a Reply

Your email address will not be published.