Home Home ಯಡಿಯೂರಪ್ಪ ರಾಜೀನಾಮೆ ನೀಡುವ ಪರಿಸ್ಥಿತಿ ಬಂದರೆ ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲುತ್ತೇವೆ: ರೇಣುಕಾಚಾರ್ಯ

ಯಡಿಯೂರಪ್ಪ ರಾಜೀನಾಮೆ ನೀಡುವ ಪರಿಸ್ಥಿತಿ ಬಂದರೆ ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲುತ್ತೇವೆ: ರೇಣುಕಾಚಾರ್ಯ

Renukacharya talking about BSY | ಯಡಿಯೂರಪ್ಪ ರಾಜೀನಾಮೆ ನೀಡುವ ಪರಿಸ್ಥಿತಿ ಬಂದರೆ ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲುತ್ತೇವೆ: ರೇಣುಕಾಚಾರ್ಯ

232
0
SHARE

ಕೆಲವು ಅವಧಿಯೂ ಬಿ ಎಸ್ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಯಾರೊ ಒಂದಿಬ್ಬರು ದೆಹಲಿಗೆ ಹೋಗಿ ಬಂದಿದ್ದಕ್ಕೆ ಯಡಿಯೂರಪ್ಪನವರ ಬದಲಾವಣೆ ಸಾಧ್ಯವಿಲ್ಲ. ಯಡಿಯೂರಪ್ಪ ನವರು ದೆಹಲಿ ವರಿಷ್ಠರು ಹೇಳಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂಬ ಹೇಳಿಕೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಈ ಹೇಳಿಕೆಯನ್ನು ನೀಡಿದ್ದಾರೆ.

ದೆಹಲಿ ವರಿಷ್ಠರು ಹೇಳಿದರೆ ರಾಜೀನಾಮೆ ನೀಡುತ್ತೇನೆ ಎಂಬ ಯಡಿಯೂರಪ್ಪ ಹೇಳಿಕೆಗೆ ಹೊನ್ನಾಳಿಯಲ್ಲಿ ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ, ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಸಾಧ್ಯವೇ ಇಲ್ಲ. ಇನ್ನುಳಿದ ಅವಧಿಯೂ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ನಾನು ಇಂದು ಬೆಂಗಳೂರಿಗೆ ಹೋಗಿ ಈ ಬಗ್ಗೆ ಯಡಿಯೂರಪ್ಪನವರೊಂದಿಗೆ ಚರ್ಚೆ ಮಾಡುತ್ತೇನೆ ಎಂದಿದ್ದಾರೆ.

ಇಂದು ಬೆಳಗ್ಗೆಯಿಂದ ಮಾಧ್ಯಮದಲ್ಲಿ ಯಡಿಯೂರಪ್ಪ ಸಿಎಂ ಸ್ಥಾನ ಬದಲಾವಣೆಯ ಸುದ್ದಿಯೇ ಜಾಸ್ತಿ ಓಡುತ್ತಿದೆ. ಬಿ ಎಸ್ ಯಡಿಯೂರಪ್ಪ ಒಂದು ದೊಡ್ಡ ಆಲದ ಮರ. ಅವರ ನೆರಳಿನಲ್ಲಿ ನಾವೆಲ್ಲ ಬೆಳೆದಿದ್ದೇವೆ. ಯಡಿಯೂರಪ್ಪ ಪಕ್ಷ ಸಂಘಟನೆ ಬಂದವರು. ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದು ಎನ್ನುವುದು ನಮ್ಮ ಪಕ್ಷದ ಸಂಸ್ಕೃತಿ. ಆದರೆ, ಭಾರತೀಯ ಜನತಾ ಪಾರ್ಟಿ ಸಂಘಟನೆ ಯಡಿಯೂರಪ್ಪನ್ನ ಆಲದ ಮರದ ರೀತಿ ಬೆಳೆಸಿದೆ.

ಯಡಿಯೂರಪ್ಪ ಬಗ್ಗೆ ರಾಜ್ಯದ ಅಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಸೇರಿದಂತೆ ನಾಯಕರು ಯಡಿಯೂರಪ್ಪ ನಾಯಕತ್ವ ಮತ್ತು ಅವರು ಎರಡು ಬಾರಿ ಕೋವಿಡ್ ನಿಯಂತ್ರಣ ಮಾಡಿ ರಾಜ್ಯವನ್ನು ರಕ್ಷಣೆ ಮಾಡಿದ್ದಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಯಾರೋ ಒಂದಿಬ್ಬರು ದೆಹಲಿಗೆ ಹೋಗಿ ಬಂದಿದ್ದಕ್ಕೆ ಯಡಿಯೂರಪ್ಪರ ನಾಯಕತ್ವ ಬದಲಾವಣೆ ಮಾಡುವ ಪ್ರಶ್ನಯೇ ಇಲ್ಲ. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

LEAVE A REPLY

Please enter your comment!
Please enter your name here