Home District ಕೊರೊನಾ ಹಿನ್ನಲೆ; ಹೇಗಿತ್ತು ಎಸ್.ಟಿ.ಸೋಮಶೇಖರ್ ಸಿಟಿ ರೌಂಡ್ಸ್?

ಕೊರೊನಾ ಹಿನ್ನಲೆ; ಹೇಗಿತ್ತು ಎಸ್.ಟಿ.ಸೋಮಶೇಖರ್ ಸಿಟಿ ರೌಂಡ್ಸ್?

482
0

ಮೈಸೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಕೆ.ಆರ್.ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಕೋವಿಡ್ ಪ್ರಕರಣಗಳ ಸ್ಥಿತಿಗತಿಯನ್ನು ಅವಲೋಕಿಸಿದರು. ವಾರ್ಡ್ ಗಳ ಲಭ್ಯತೆ, ಕೋವಿಡ್ ಸೋಂಕಿತರಿಗೆ ನೀಡಲಾಗುತ್ತಿರುವ ಊಟ-ಉಪಹಾರ ಸರಬರಾಜು ಸೇರಿದಂತೆ ಕುಂದು-ಕೊರತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ವೈದ್ಯಾಧಿಕಾರಿಗಳು ಹಾಗೂ ಸೋಂಕಿತರಿಂದ ಮಾಹಿತಿ ಪಡೆದ ಸಚಿವರು, ಯಾವುದೇ ಸಮಸ್ಯೆಗಳಿದ್ದರೂ ತಮ್ಮ ಗಮನಕ್ಕೆ ತರುವಂತೆ ತಿಳಿಸಿದರು.

ಮೈಸೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳ,ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಸೋಮಶೇಖರ್,ವಾರ್ಡ್ ಗಳ ಲಭ್ಯತೆ, ವಾರ್ಡ್ ಗಳ ಲಭ್ಯತೆ ಪರಿಶೀಲನೆ,ಏನೇ ಸಮಸ್ಯೆಗಳಿದ್ದರೂ ಗಮನಕ್ಕೆ ತರುವಂತೆ ಸೂಚನೆ.

ಔಷಧಗಳು ಸೇರಿದಂತೆ ಯಾವುದೇ ನ್ಯೂನತೆಗಳು, ಸಮಸ್ಯೆಗಳಿದ್ದರೂ ತಮಗೆ ತಿಳಿಸಿದರೆ ಸರ್ಕಾರದ ಗಮನಕ್ಕೆ ತಂದು ತಕ್ಷಣ ಬಗೆಹರಿಸಿಕೊಡುತ್ತೇನೆ. ಆದರೆ, ಯಾವುದೇ ಕಾರಣಕ್ಕೂ ಮೈಸೂರು ಹಾಗೂ ಸುತ್ತಮುತ್ತಲಿನ ಭಾಗದ ಜನತೆಗೆ ಸಮಸ್ಯೆಯಾಗಬಾರದು. ಆ ನಿಟ್ಟಿನಲ್ಲಿ ನಾನೂ ಸೇರಿದಂತೆ ಇಲ್ಲಿನ ಜಿಲ್ಲಾಡಳಿತ, ಜನಪ್ರತಿನಿಧಿಗಳು ಬದ್ಧವಾಗಿದ್ದೇವೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿಯವರಾದ ರೋಹಿಣಿ ಸಿಂಧೂರಿ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಲ್.ನಾಗೇಂದ್ರ ಸೇರಿದಂತೆ ಇನ್ನಿತರ ಮುಖಂಡರು ಇದೇ ವೇಳೆ ಉಪಸ್ಥಿತರಿದ್ದರು.

ಎಚ್ಚರದಿಂದಿರಲು ಜನತೆಗೆ ಮನವಿ; ಈಗ ಕಾಡುತ್ತಿರುವ ಕೋವಿಡ್ ಎರಡನೇ ಅಲೆ ಬಹಳ ಗಂಭೀರವಾಗಿದೆ. ಹೀಗಾಗಿ ಸಾರ್ವಜನಿಕರು ಸಹ ಇದನ್ನು ಅಷ್ಟೇ ಗಂಭೀರವಾಗಿ ಪರಿಗಣಿಸಬೇಕು. ಸ್ವಯಂಪ್ರೇರಿತವಾಗಿ ಸರ್ಕಾರದ ಜೊತೆಗೆ ಕೈಜೋಡಿಸಿ ನಮ್ಮ ನಾಡನ್ನು ಕೊರೋನಾ ಮುಕ್ತ ಮಾಡುವಲ್ಲಿ ಶ್ರಮವಹಿಸಬೇಕು. ಯಾರಿಗೇ ಸಹ ರೋಗದ ಲಕ್ಷಣಗಳು ಕಂಡುಬಂದರೆ ತಕ್ಷಣ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಸೋಂಕು ಉಲ್ಬಣವಾಗದಂತೆ ನೋಡಿಕೊಳ್ಳಬೇಕು. ಜೊತೆಗೆ ಅನಾವಶ್ಯಕವಾಗಿ ಹೊರಗಡೆ ಯಾರೂ ಸಂಚರಿಸಬಾರದು, ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸಿ, ಆಗಾಗ ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಜೊತೆಗೆ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಇದೇ ಸಂದರ್ಭದಲ್ಲಿ ಸಚಿವರಾದ ಸೋಮಶೇಖರ್ ಅವರು ಜನತೆಯಲ್ಲಿ ಮನವಿ ಮಾಡಿದರು.

Previous articleಬೆಂಗಳೂರಿನಲ್ಲಿ ಲಾಕ್‌ಡೌನ್‌ಗಿಂತಲೂ ಕಠಿಣ ನಿರ್ಧಾರ ಜಾರಿಗೊಳಿಸ್ತೇವೆ; ಡಾ.ಕೆ.ಸುಧಾಕರ್
Next articleಕೊರೋನಾ ಆರ್ಭಟಕ್ಕೆ ಬೆಂಗಳೂರು ತತ್ತರ; ಸಾವಿನ ರಾಜಧಾನಿಯಾಗುತ್ತಿದೆಯಾ ಬೆಂಗಳೂರು?

LEAVE A REPLY

Please enter your comment!
Please enter your name here