Home District ಜನರ ಅಳಲನ್ನು ಆಲಿಸಿದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್

ಜನರ ಅಳಲನ್ನು ಆಲಿಸಿದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್

208
0
SHARE

ಚಾಮರಾಜನಗರ.ಮೇ.4: ಭಾನುವಾರ ರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಮಾರಣಹೋಮದಲ್ಲಿ ಸಾವನ್ನಪ್ಪಿದ ಕೋವಿಡ್ ಸೋಂಕಿತರ ಕುಟುಂಬವು ರಾಜ್ಯ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಅಳಲನ್ನು ತೋಡಿಕೊಂಡರು.

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೊಡ್ಡಹೊಮ್ಮ ಗ್ರಾಮದ ಸುರೇಂದ್ರ ರವರಿಗೆ ಕಳೆದ ಕೆಲವು ದಿನಗಳ ಹಿಂದೆ ಕೋರೊನಾ ಸೋಂಕು ದೃಡವಾಗಿತ್ತು. ಅವರನ್ನು ಬಸವರಾಜೇಂದ್ರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆ ಬಳಿಕ ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಭಾನುವಾರ ರಾತ್ರಿ ಆಕ್ಸಿಜನ್ ಸಿಗದೆ ಸಾವನ್ನಪ್ಪಿದ್ದಾನೆ ಆತನಿಗೆ ಕಳೆದ ಎರಡು ತಿಂಗಳ ಹಿಂದೆ ಕೆರಹಳ್ಳಿ ಗ್ರಾಮದ ಯುವತಿಯೊಂದಿಗೆ ವಿವಾಹವಾಗಿತ್ತು ಎಂದು ನೊಂದ ಕುಟುಂಬಸ್ಥರು ವಿವರಣೆ ನೀಡಿದರು.

LEAVE A REPLY

Please enter your comment!
Please enter your name here