Home District ಪರಿಕ್ಷೆಯೇ ಇಲ್ಲದೇ 1-9ನೇ ತರಗತಿ ವಿದ್ಯಾರ್ಥಿಗಳು ಪಾಸ್!

ಪರಿಕ್ಷೆಯೇ ಇಲ್ಲದೇ 1-9ನೇ ತರಗತಿ ವಿದ್ಯಾರ್ಥಿಗಳು ಪಾಸ್!

402
0

ಒಂದರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ತೇರ್ಗಡೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಕೋವಿಡ್ 2ನೇ ಅಲೆ ಅವಾಂತರ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಮೌಲ್ಯಾಂಕನ ವಿಶ್ಲೇಷಣಾ ಫಲಿತಾಂಶ ನೀಡಲು ನಿರ್ಧಾರಿಸಲಾಗಿದೆ.ಮುಂದಿನ ತರಗತಿಗೆ ಬಡ್ತಿ ನೀಡುವುದು .ಅದನ್ನು ಪ್ರಗತಿ ಪತ್ರದಲ್ಲಿ ದಾಖಲಿಸುವುದು ಸೇರಿದಂತೆ ಈ ಎಲ್ಲ ಪ್ರಕ್ರಿಯೆಗಳನ್ನು ಏಪ್ರಿಲ್ 30ರೊಳಗೆ ನಿರ್ವಹಿಸಿ ಫಲಿತಾಂಶ ದಾಖಲಿಸಿ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ. ಒಂದರಿಂದ ಐದನೇ ತರಗತಿವರೆಗೆ ಶಾಲಾ ಹಂತದಲ್ಲಿ ಮಕ್ಕಳ ಪ್ರಗತಿ ವಿಶ್ಲೇಷಿಸಿ ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಬಡ್ತಿ ನೀಡಲಾಗುವುದು.

6ರಿಂದ 9ನೇ ತರಗತಿಗಳ ಮಕ್ಕಳ ಪಾಠ ಪ್ರವಚನ, ಕಲಿಕಾ ಪೂರಕ ಚಟುವಟಿಕೆ, ಪ್ರಾಜೆಕ್ಟ್ ಚಟುವಟಿಕೆಗಳ ನೆಲೆಯಲ್ಲಿ ಈಗಾಗಲೇ ಕೈಗೊಂಡಿರುವ ರೂಪಣಾತ್ಮಕ ಮೌಲ್ಯಮಾಪನ ಹಾಗೂ ಸಂಕಲನಾತ್ಮಕ ಮೌಲ್ಯಮಾಪನವನ್ನು ನಿರ್ವಹಿಸಿದ ದಾಖಲೆಗಳನ್ನಾಧರಿಸಿ ಪಡೆದ ಅಂಕಗಳನ್ನು 100ಕ್ಕೆ ವೃದ್ಧಿಸಿ ಶ್ರೇಣಿ ನಮೂದಿಸಿ ಮುಂದಿನ ತರಗತಿಗಳಿಗೆ ಬಡ್ತಿ ನೀಡಲಾಗುತ್ತದೆ.ಪ್ರಾಥಮಿಕ ಶಾಲೆಗಳಿಗೆ ಮೇ 1ರಿಂದ ಜೂನ್ 14ರವರಗೆ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ.ಜೂನ್ 15 ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಹಾಗೆ. 8 ಮತ್ತು 9ನೇ ತರಗತಿಗಳಲ್ಲಿನ ವಿದ್ಯಾರ್ಥಿಗಳಿಗೆ ಮೇ 1ರಿಂದ ಜುಲೈ 14ರವರೆಗೆ ಬೇಸಿಗೆ ರಜೆ ಪ್ರಕಟಿಸಲಾಗಿದೆ.ಜುಲೈ 15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ.

Previous articleಕೊರೋನಾ ಬಗ್ಗೆ ಜಾಗೃತಿ ಮೂಡಿಸಿದ ಆ ಪುಟ್ಟ ಬಾಲಕಿಯ ವಿಡಿಯೋ ವೈರಲ್!
Next articleಬೆಂಗಳೂರಿನಲ್ಲಿ ಲಾಕ್‌ಡೌನ್‌ಗಿಂತಲೂ ಕಠಿಣ ನಿರ್ಧಾರ ಜಾರಿಗೊಳಿಸ್ತೇವೆ; ಡಾ.ಕೆ.ಸುಧಾಕರ್

LEAVE A REPLY

Please enter your comment!
Please enter your name here