Home Home ಪರಿಹಾರ ವಿತರಣೆ ಕುರಿತು ಸಚಿವ ಸುರೇಶ್ ಕುಮಾರ್ ಹೇಳಿದ್ದೇನು ಗೊತ್ತೇ?

ಪರಿಹಾರ ವಿತರಣೆ ಕುರಿತು ಸಚಿವ ಸುರೇಶ್ ಕುಮಾರ್ ಹೇಳಿದ್ದೇನು ಗೊತ್ತೇ?

ಪರಿಹಾರ ವಿತರಣೆ ಕುರಿತು ಸಚಿವ ಸುರೇಶ್ ಕುಮಾರ್ ಹೇಳಿದ್ದೇನು ಗೊತ್ತೇ?

390
0

ವರದಿ; ನಾ ಅಶ್ವಥ್ ಕುಮಾರ್

ಚಾಮರಾಜನಗರ : ಮೇ 2 ಮತ್ತು 3 ರಂದು ಆಕ್ಸಿಜನ್ ಕೊರತೆಯಿಂದ ಕೋವಿಡ್ ಆಸ್ಪತ್ರೆಯಲ್ಲಿ ಮೃತ ಪಟ್ಟ 24 ವ್ಯಕ್ತಿಗಳ ಕುಟುಂಬಗಳಿಗೆ ಇಂದಿನಿಂದ ಪರಿಹಾರ ವಿತರಣೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ವ್ಯವಸ್ಥೆ ವೀಕ್ಷಿಸಿದ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿ, ಆಕ್ಸಿಜನ್ ಕೊರತೆಯಿಂದ ಮೃತ ಪಟ್ಟ 24 ವ್ಯಕ್ತಿಗಳ ಕುಟುಂಬಗಳಿಗೆ ಕೂಡಲೇ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಹೈ ಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು 48 ಲಕ್ಷರೂಪಾಯಿಗಳನ್ನು ಬಿಡುಗಡೆ ಮಾಡಿದ್ದು, ಮೃತ ವ್ಯಕ್ತಿಗಳ ಕುಟುಂಬಕ್ಕೆ ಪರಿಹಾರ ವಿತರಣೆ ಮಾಡಲು ಆಯಾ ತಾಲ್ಲೂಕಿನ ತಹಸೀಲ್ದಾರ್ ರವರಿಗೆ ಸೂಚನೆ ನೀಡಲಾಗಿದೆ ಎಂದರು.

24 ಮಂದಿಯಲ್ಲಿ 22 ಮಂದಿ ಚಾಮರಾಜನಗರ ಜಿಲ್ಲೆಗೆ ಸೇರಿದವರಾಗಿದ್ದು ಇಬ್ಬರು ಮೈಸೂರು ಮತ್ತು ಮಂಡ್ಯ ಜಿಲ್ಲೆಗೆ ಸೇರಿದ್ದಾರೆ ಅವರಿಗೂ ಪರಿಹಾರ ನೀಡಲಾಗುವುದು ಎಂದರು .

ಆಕ್ಸಿಜನ್ ಕೋರತೆ ದುರಂತ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶೀಘ್ರದಲ್ಲೇ ಶಿಸ್ತು ಕ್ರಮವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಹೇಳಿ, ಇಲ್ಲಿ ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಪ್ರಕರಣದ ವಿಚಾರಣೆ ಹೈ ಕೋರ್ಟ್ ನಲ್ಲಿರುವುದರಿಂದ ಹೆಚ್ಚಾಗಿ ಪ್ರತಿಕ್ರಿಯೆ ನೀಡಲಾರೆ ಎಂದರು.

ಚಾಮರಾಜನಗರ ಜಿಲ್ಲಾಧಿಕಾರಿ ಫೆಬ್ರವರಿಯಲ್ಲಿ ವರ್ಗಾವಣೆಯಾಗಿದ್ದರು, ಪ್ರಭಾವ ಬಳಸಿಕೊಂಡು ಇಲ್ಲೇ ಉಳಿದು ಕೊಂಡರು, ಈಗ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ಕೊರತೆಯಿಂದ ಕೋವಿಡ್ ಸೋಂಕಿತರ ಸಾವಿಗೆ ಜಿಲ್ಲಾಡಳಿತ ನೇರ ಹೊಣೆ ಎಂದು ನ್ಯಾಯಾದೀಶರ ತನಿಖಾವರದಿಯಲ್ಲಿ ಉಲ್ಲೇಖವಾಗಿರುವ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದು, ಮತ್ತೇ ಪ್ರಭಾವ ಬಳಸಿಕೊಂಡು ಇಲ್ಲೇ ಉಳಿದಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಲು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ನಿರಾಕರಿಸಿದರು.

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ, ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಬಗ್ಗೆ ಸ್ಪಷ್ಟನೆ ಕೇಳಿದಾಗ ಇದಕ್ಕೆ ಉತ್ತರಿಸದೇ ಕಾರಿನತ್ತ ಹೆಜ್ಜೆ ಹಾಕಿದರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್.

VIAಪರಿಹಾರ ವಿತರಣೆ ಕುರಿತು ಸಚಿವ ಸುರೇಶ್ ಕುಮಾರ್ ಹೇಳಿದ್ದೇನು ಗೊತ್ತೇ?
SOURCEಪರಿಹಾರ ವಿತರಣೆ ಕುರಿತು ಸಚಿವ ಸುರೇಶ್ ಕುಮಾರ್ ಹೇಳಿದ್ದೇನು ಗೊತ್ತೇ?
Previous articleಸಾವಿನ ಮನೆಯಾದ ಚಾಮರಾಜನಗರ!
Next articleಸೋಮವಾರ ಬೆಳಗ್ಗೆಯಿಂದ ತೆರಕಣಾಂಬಿ ಕೋವಿಡ್ ಸೋಂಕಿತರಿಂದ ಪ್ರತಿಭಟನೆ

LEAVE A REPLY

Please enter your comment!
Please enter your name here