ಟಿ.ಎ. ಶರವಣ JDS ಪಕ್ಷದ ಶಾಸಕಾಂಗ ಪಕ್ಷದ ಉಪ ನಾಯಕರಾಗಿ ನೇಮಕ

ಬೆಂಗಳೂರು

ಬೆಂಗಳೂರು: ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ಉಪ ನಾಯಕರನ್ನಾಗಿ ಪರಿಷತ್ ಸದಸ್ಯ ಟಿಎ ಶರವಣ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಸಭಾಪತಿಗಳಿಗೆ ಪತ್ರ ಬರೆದಿದ್ದು, ವಿಧಾನ ಪರಿಷತ್ ನಲ್ಲಿ ಟಿಎ ಶರವಣ ಅವರನ್ನು ತಕ್ಷಣದಿಂದ ಮಾನ್ಯ ಮಾಡುವಂತೆ ಪತ್ರದ ಮೂಲಕ ಕೋರಿದ್ದಾರೆ.

ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಪಕ್ಷದ ಏಳಿಗೆಗಾಗಿ ಶ್ರಮಿಸುತ್ತಿರುವ ಪರಿಷತ್ ಸದಸ್ಯ ಟಿಎ ಶರವಣ ಅವರಿಗೆ ಪಕ್ಷದಲ್ಲಿ ಹೆಚ್ಚಿನ ಸ್ಥಾನಮಾನ ನೀಡಲಾಗಿದ್ದು, ಅದರಂತೆ ವಿಧಾನ ಪರಿಷತ್ ನಲ್ಲಿ ಶಾಸಕಾಂಗ ಪಕ್ಷದ ಉಪ ನಾಯಕರನ್ನಾಗಿ ನೇಮಕ ಮಾಡುವ ಮೂಲಕ ಜೆಡಿಎಸ್ ಪಕ್ಷವು ಮತ್ತಷ್ಟು ಜವಾಬ್ದಾರಿ ನೀಡಿದೆ. ಈ ಹಿನ್ನೆಲೆ ಪಕ್ಷದ ಶಾಸಕಾಂಗ ಪಕ್ಷದ ಉಪ ನಾಯಕರನ್ನಾಗಿ ಟಿಎ ಶರವಣ ಅವರನ್ನು ತಕ್ಷಣದಿಂದ ಮಾನ್ಯ  ಮಾಡುವಂತೆ ಸಭಾಪತಿಗಳಿಗೆ ಪತ್ರದ ಮೂಲಕ ಸಿಎಂ ಇಬ್ರಾಹಿಂ ಮನವಿ ಮಾಡಿದ್ದಾರೆ.