ಹಾಸ್ಟೆಲ್ ನ ಕಿಟಕಿ ಮುರಿದು ಮೂವರು ವಿದ್ಯಾರ್ಥಿನಿಯರು ಪರಾರಿ..!

ಜಿಲ್ಲೆ

ಮಂಗಳೂರು: ನಗರದ ಖಾಸಗಿ ಕಾಲೇಜೊಂದರ ಹಾಸ್ಟೆಲ್‍ನಲ್ಲಿದ್ದ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ಕಿಟಕಿಯ ರಾಡ್ ಮುರಿದು ಪರಾರಿಯಾಗಿರುವ ಘಟನೆ ವರದಿಯಾಗಿದೆ. ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರಾದ ಯಶಸ್ವಿನಿ, ದಕ್ಷತಾ, ಸಿಂಚನಾ ಪಿಯುಸಿ ವಿದ್ಯಾರ್ಥಿಗಳಾಗಿದ್ದು, ಹಾಸ್ಟೆಲ್‍ನಲ್ಲಿ ಇದ್ದು ವ್ಯಾಸಂಗ ಮಾಡುತ್ತಿದ್ದರು.

ಮುಂಜಾನೆ 3 ಗಂಟೆ ಸುಮಾರಿಗೆ ನಾವು ಹೋಗುತ್ತಿದ್ದೇವೆ, ಕ್ಷಮಿಸಿ ಎಂದು ಪತ್ರ ಬರೆದಿಟ್ಟು ಹಾಸ್ಟೆಲ್‍ನ ಕಿಟಕಿಯ ರಾಡ್ ಮುರಿದು ಪರಾರಿಯಾಗಿದ್ದಾರೆ. ಪರಾರಿಯಾದ ವಿದ್ಯಾರ್ಥಿನಿಯರಲ್ಲಿ ಯಶಸ್ವಿನಿ ಮತ್ತು ದಕ್ಷತಾ ಬೆಂಗಳೂರು ನಿವಾಸಿಗಳಾಗಿದ್ದು, ಸಿಂಚನಾ ಚಿತ್ರದುರ್ಗ ಮೂಲದ ವಿದ್ಯಾರ್ಥಿನಿ. ಮುಂಜಾನೆ 3 ಗಂಟೆ ವೇಳೆಗೆ ಕಿಟಕಿ ರಾಡ್ ಮುರಿದು ಹೊರಬಂದು ದಾರಿಯಲ್ಲಿ ಬ್ಯಾಗ್‍ನೊಂದಿಗೆ ಹೋಗುತ್ತಿರುವ ಸಿಸಿಟಿವಿ ವೀಡಿಯೋ ಹರಿದಾಡುತ್ತಿದೆ.