ಸಂಚಾರ ದಟ್ಟಣೆ ಶೇ 15ರಿಂದ 40ರಷ್ಟು ಸುಧಾರಣೆ ಕಂಡಿದೆ; ತುಷಾರ್ ಗಿರಿನಾಥ್

ಜಿಲ್ಲೆ

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಶೇ 15ರಿಂದ 40ರಷ್ಟು ಸುಧಾರಣೆ ಕಂಡಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ ತಿಳಿಸಿದರು. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಜೊತೆ ಸೋಮವಾರ ಸಮನ್ವಯ ಸಭೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

 

ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಒಟ್ಟಿಗೆ ಸೇರಿ ಸಮನ್ವಯದಿಂದ ಕೆಲಸ ಮಾಡುತ್ತಿವೆ. ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುತ್ತಿದೆ. ಪ್ರಮುಖ ಜಂಕ್ಷನ್‌ಗಳಲ್ಲಿ ದಟ್ಟಣೆ ಕಡಿಮೆಯಾಗಿದ್ದು, ನಿಖರ ವರದಿ ನೀಡಲು ಇನ್‌ಫ್ರಾಸ್ಟ್ರಕ್ಚರ್ ಸಂಸ್ಥೆಗೆ ತಿಳಿಸಲಾಗಿದೆ’ ಎಂದರು.

ಇನ್ನೂ ಹೆಬ್ಬಾಳ, ಕೆ.ಆರ್.ಪುರ, ಗೊರಗುಂಟೆ ಪಾಳ್ಯ, ಸಾರಕ್ಕಿ, ಸಿಲ್ಕ್ ಬೋರ್ಡ್ ಜಂಕ್ಷನ್‌ಗಳಲ್ಲಿ ವಿವಿಧ ಇಲಾಖೆಗಳಿಂದ ಕೆಲಸ ನಡೆಯುತ್ತಿದೆ. ಬಹುತೇಕ ಕಡೆ ಶೇ 50ರಷ್ಟು ಕೆಲಸ ಪೂರ್ಣಗೊಂಡಿದ್ದು, ಬಾಕಿ ಕೆಲಸ ಮುಗಿದರೆ ದಟ್ಟಣೆ ನಿವಾರಣೆಯಾಗಲಿದೆ ಎಂದು ಗಿರಿನಾಥ್ ತಿಳಿಸಿದರು.

Leave a Reply

Your email address will not be published.