Sunday, September 25, 2022

ನಿರುದ್ಯೋಗಿ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ತಂತ್ರಜ್ಞಾನ

ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆಯಲ್ಲಿ 11,513 ಕೋಟಿ ರೂ. ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ 10 ಬಂಡವಾಳ ಹೂಡಿಕೆಯ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

ಇದರಿಂದ 46,984 ಉದ್ಯೋಗ ಸೃಜನೆಯಾಗುವ ನಿರೀಕ್ಷೆ ಇದೆ. ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಪಗುತ್ತಿಗೆ ಮತ್ತು ಗುತ್ತಿಗೆ ಅವಧಿಯನ್ನು ಮಿತಿಮೀರಿ ವಿಸ್ತರಿಸಬಾರದು. ಈ ಬಗ್ಗೆ ಸ್ಪಷ್ಟ ನಿಯಮಗಳನ್ನು ರೂಪಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದರು.

ಕೈಗಾರಿಕೆಗಳಿಗೆ ನೀಡಲಾಗಿರುವ ಜಮೀನು ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ವಿದ್ಯುತ್ ಹಾಗೂ ಸ್ಟೀಲ್ ಯೋಜನೆಗಳಿಗೆ ಸಂಬಂಧಿಸಿದ ಕೈಗಾರಿಕೆಗಳಲ್ಲಿ ನೀರಿನ ಬಳಕೆಯ ಪ್ರಮಾಣ ಹೆಚ್ಚಿರುತ್ತದೆ. ಕೈಗಾರಿಕೆಗಳಲ್ಲಿ ನೀರಿನ ಬಳಕೆಗೆ ವ್ಯವಸ್ಥೆ ಕಲ್ಪಿಸಬೇಕು ಎಂದರು.

Leave a Reply

Your email address will not be published.