ಜೂನ್ 3ರಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ..? ಇಲ್ಲಿದೆ ವಿವರ

ತಂತ್ರಜ್ಞಾನ

ನವದೆಹಲಿ : ಅಬಕಾರಿ ಸುಂಕ, ಡೀಲರ್ ಕಮಿಷನ್ ಮತ್ತು ವ್ಯಾಟ್ ಸೇರಿಸಿದ ನಂತರ ಪೆಟ್ರೋಲ್‌ನ ಚಿಲ್ಲರೆ ಮಾರಾಟದ ಬೆಲೆ ಸುಮಾರು ದ್ವಿಗುಣಗೊಳ್ಳುತ್ತದೆ. ವಿವಿಧ ಅಂಶಗಳು ಇಂಧನ ಬೆಲೆಯ ಮೇಲೆ ಪರಿಣಾಮ ಬೀರುತ್ತವೆ. ಇವುಗಳಲ್ಲಿ ರೂಪಾಯಿ-ಡಾಲರ್ ವಿನಿಮಯ ದರ, ಕಚ್ಚಾ ತೈಲದ ಬೆಲೆ, ಜಾಗತಿಕ ವಿದ್ಯಮಾನಗಳು, ಇಂಧನದ ಬೇಡಿಕೆ, ಇತ್ಯಾದಿ ಒಳಗೊಂಡಿರುತ್ತದೆ. ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳು ಏರಿದಾಗ ಭಾರತದಲ್ಲಿಯೂ ತೈಲ ಬೆಲೆಗಳು ಹೆಚ್ಚಾಗುತ್ತವೆ. ಇಂದಿನ ಇಂಧನ ದರಗಳ ಬಗ್ಗೆ ತಿಳಿಯೋಣ..

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಇತ್ತೀಚಿನ ಅಬಕಾರಿ ಸುಂಕ ಕಡಿತದ ನಂತರ ಪೆಟ್ರೋಲ್ ಪ್ರತಿ ಲೀಟರ್‌ಗೆ 111.35 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 97.28 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಆಗಿದೆ.

ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 102.63 ರೂ. ಮತ್ತು ಡೀಸೆಲ್‌ಗೆ 94.24 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಯಥಾಸ್ಥಿತಿಯಲ್ಲಿದೆ. ಪೆಟ್ರೋಲ್​ ಲೀಟರ್​ಗೆ 101.94 ರೂ. ಮಾರಾಟವಾಗುತ್ತಿದ್ದರೆ, ಡೀಸೆಲ್ ದರ 87.89ರೂ.ಗೆ ಮಾರಾಟವಾಗುತ್ತಿದೆ.

ಹುಬ್ಬಳ್ಳಿಯಲ್ಲಿ ಪೆಟ್ರೋಲ್ ದರ ಒಂದು ಲೀಟರ್​ಗೆ 101.65 ರೂಪಾಯಿ ಮತ್ತು ಡೀಸೆಲ್​ ದರ ಒಂದು ಲೀಟರ್​ಗೆ 87.65 ರೂಪಾಯಿ ಇದೆ. ಮಂಗಳೂರಿನಲ್ಲಿ ಪೆಟ್ರೋಲ್ ಲೀಟರ್​ಗೆ 101.14 ರೂಪಾಯಿ ಇದ್ದು, ಲೀಟರ್​ ಡೀಸೆಲ್​ಗೆ 87.14 ರೂಪಾಯಿ ಇದೆ. ಮೈಸೂರಿನಲ್ಲಿ ಪೆಟ್ರೋಲ್ ದರ ಒಂದು ಲೀಟರ್‌ಗೆ 101.44 ರೂಪಾಯಿ, ಡೀಸೆಲ್‌ ದರ ಒಂದು ಲೀಟರ್‌ಗೆ 87.43 ರೂಪಾಯಿ ಇದೆ. ದಾವಣಗೆರೆಯಲ್ಲಿ ಇಂದಿನ ತೈಲ ದರ ಪೆಟ್ರೋಲ್ ಲೀಟರ್​ಗೆ 103.60 ರೂಪಾಯಿ ಇದ್ದು, ಲೀಟರ್​ ಡೀಸೆಲ್​ಗೆ 89.52 ರೂಪಾಯಿ ಇದೆ. ಕ್ರೂಡ್ ಆಯಿಲ್​ ಕಳೆದ ಕೆಲವು ವಹಿವಾಟು ಅವಧಿಗಳಲ್ಲಿ ಏರಿಕೆಯಾದ ನಂತರ ಶುಕ್ರವಾರ ತೈಲ ಬೆಲೆಗಳು ಸ್ಥಿರವಾಗಿವೆ.

Leave a Reply

Your email address will not be published.