ಮುಂದಿನ ವರ್ಷ ಯುವ ಬಜೆಟ್ ಮಂಡನೆ ಮಾಡಲಾಗುತ್ತದೆ: CM ಬಸವರಾಜ ಬೊಮ್ಮಾಯಿ

ಬೆಂಗಳೂರು

ಬೆಂಗಳೂರು: ಮುಂದಿನ ವರ್ಷ ಯುವ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಡಾ.ಆರ್.ಬಾಲಸುಬ್ರಹ್ಮಣ್ಯ ಸಮಿತಿ ಇಂದು ಕರಡು ಯುವ ನೀತಿಯನ್ನು ಮುಖ್ಯಮಂತ್ರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ದೇಶದ ಶೇ. 46 ರಷ್ಟು ಜನಸಂಖ್ಯೆಯಲ್ಲಿ ಯುವಕರಿದ್ದಾರೆ. ಇವರನ್ನು ದೇಶ ಕಟ್ಟುವ ಕೆಲಸದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕಾಗಿದೆ. ಆರ್ಥಿಕ ಅಭಿವೃದ್ಧಿಯ ಮೂಲಕ ಯುವ ಸಬಲೀಕರಣವಾಗಬೇಕಾಗಿದೆ. ಜೊತೆಗೆ ಉತ್ತಮ ವ್ಯಕ್ತಿತ್ವ ನಿರ್ಮಾಣವೂ ಆಗಬೇಕಾಗಿದೆ.

ಈ ಹಿನ್ನೆಲೆಯಲ್ಲಿ ಮುಂದಿನ ಆಯವ್ಯಯದಲ್ಲಿ ಯುವ ಬಜೆಟ್​ ರೂಪಿಸಲಾಗುವುದು ಎಂದರು. ಯುವ ನೀತಿಯ ಕರಡನ್ನು ಕೂಡಲೇ ಸಚಿವ ಸಂಪುಟದ ಅನುಮೋದನೆ ಪಡೆದುಕೊಂಡು ನೀತಿಯನ್ನು ಜಾರಿಗೊಳಿಸಲಾಗುವುದು. ಈ ಕರಡು ಯುವ ನೀತಿಯ ಮುಖ್ಯಾಂಶಗಳನ್ನು ಉಲ್ಲೇಖಿಸಿದ ಡಾ.ಬಾಲಸುಬ್ರಹ್ಮಣ್ಯ ಅವರು ನೀತಿಯು ಯುವ ಕೇಂದ್ರಿತವಾಗಿದ್ದು, ನೀತಿಯ ಅನುಷ್ಠಾನಕ್ಕೆ ಕಾರ್ಯತಂತ್ರ, ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನದ ಅಂಶಗಳನ್ನೂ ಒಳಗೊಂಡಿದೆ. ಸುಸ್ಥಿರ ಅಭಿವೃದ್ಧಿ ಗುರಿಯೊಂದಿಗೂ ಸಂಯೋಜನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

Leave a Reply

Your email address will not be published.